ಸಿಪಿಎಂ-ಐ ಗೆ 3016 ರಲ್ಲೂ ಅಧಿಕಾರ ಸಿಗಲ್ಲ: ಮಮತಾ ಬ್ಯಾನರ್ಜಿ
ರೈತರ ರ್ಯಾಲಿಯಲ್ಲಿ ಹಿಂಸಾಚಾರ ನಡೆದಿದ್ದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದು, ಇನ್ನೂ 1000 ವರ್ಷ ಕಳೆದರೂ ಸಿಪಿಐ-ಎಂ ಗೆ ಗೆಲುವು ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೋಲ್ಕತ್ತ: ಸಿಪಿಐ-ಎಂ ಹಮ್ಮಿಕೊಂಡಿದ್ದ ರೈತರ ರ್ಯಾಲಿಯಲ್ಲಿ ಹಿಂಸಾಚಾರ ನಡೆದಿದ್ದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದು, ಇನ್ನೂ 1000 ವರ್ಷ ಕಳೆದರೂ ಸಿಪಿಐ-ಎಂ ಗೆ ಗೆಲುವು ಸಿಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಛಾತ್ರ ಪರಿಷತ್ ನಲ್ಲಿ ಭಾಗವಹಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕಮ್ಯುನಿಷ್ಟ್ ಪಕ್ಷ ರಾಜಕೀಯ ದಿವಾಳಿಯತ್ತ ಸಾಗುತ್ತಿದೆ. ಜನರಿಂದ ತಿರಸ್ಕೃತಗೊಂಡವರು, ಅರಾಜಕತೆ ಸೃಷ್ಟಿಸುತ್ತಿರುವವರು, ರಾಜ್ಯದಲ್ಲಿ ಆತಂಕಕಾರಿ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಸಿಪಿಐ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ 2016 ಅಲ್ಲ 3016 ರಾದರು ಅದು ಅಧಿಕಾರಕ್ಕೆ ಬರವುದಿಲ್ಲ, ಎಲ್ಲಾ ಪ್ರದೇಶಗಳ ಜನೆತೆ ಸಿಪಿಐ-ಎಂ ನ್ನು ತಿರಸ್ಕರಿಸಿದ್ದಾರೆ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಪ್ರತಿಭಟನೆ ಎಂದರೆ ಗೂಂಡಾಗಿರಿ ನಡೆಸುವುದಲ್ಲ, ವಿರೋಧ ಪಕ್ಷದಲ್ಲಿದ್ದಾಗ ನಾವೂ ಪ್ರತಿಭಟನೆ ನಡೆಸಿದ್ದೇವೆ. ಆದರೆ ಎಂದಿಗೂ ಶಾಂತಿ ಕದಡುವ ಕೆಲಸ ಮಾಡಿಲ್ಲ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


