ಹಿಂಸಾಚಾರಕ್ಕೆ ತಿರುಗಿದ ಪಟೇಲ್ ಹೋರಾಟ: 3 ಕಡೆ ಕರ್ಫ್ಯೂ ಜಾರಿ
ಗುಜರಾತ್ ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ...

ಅಹ್ಮದಾಬಾದ್: ಗುಜರಾತ್ ನ ಪ್ರಭಾವಿ ಪಟೇಲ್ ಸಮುದಾಯಕ್ಕೆ ಸರ್ಕಾರಿ ನೌಕರಿ ಹಾಗೂ ಶಾಲಾ, ಕಾಲೇಜುಗಳ ಪ್ರವೇಶದಲ್ಲಿ ಮೀಸಲಾತಿಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಟೇಲ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು 3 ಪ್ರದೇಶಗಳಲ್ಲಿ ಶುಕ್ರವಾರ ಕರ್ಫ್ಯೂ ಜಾರಿ ಮಾಡಿದ್ದಾರೆ.
ಗುಜರಾತ್ ನ ಪ್ರಭಾವಿ ಸಮುದಾಯವಾಗಿರುವ ಪಟೇಲ್ ಸಮುದಾಯವನ್ನು ಒಬಿಸಿ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಕೋರಿ ಪಟೇಲ್ ಸಮುದಾಯದ ಜನತೆ ಆಗಸ್ಟ್ 25 ರಂದು ಪ್ರತಿಭಟನೆಗಿಳಿದಿತ್ತು. ಈ ಪ್ರತಿಭಟನೆಯು ಗುಜರಾತ್, ಅಹ್ಮದಾಬಾದ್ ಹಾಗೂ ಸೂರತ್ ನಲ್ಲಿಯೂ ನಡೆಯಿತು. ಆದರೆ, ದಿನಕಳೆಯುತ್ತಿದ್ದಂತೆ ಈ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಯ ಪ್ರಮುಖ ರುವಾರಿಯಾಗಿದ್ದ ಹಾರ್ದಿಕ್ ಪಟೇಲ್ ಅವರನ್ನು ಬಂಧನಕ್ಕೊಳಪಡಿಸಿದ್ದರು.
ನಂತರ ಹಾರ್ದಿಕ್ ಪಟೇಲ್ ಅವರನ್ನು ಬಿಡುಗಡೆ ಮಾಡಿತ್ತು. ಆದರೆ, ಇದೀಗ ಪಟೇಲ್ ಸಮುದಾಯದ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಹ್ಮದಾಬಾದ್ ನ ಸುಮಾರು 3 ಪ್ರದೇಶಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


