ಇಂದು ರಾಷ್ಟ್ರೀಯ ಕ್ರೀಡಾ ದಿನ: ಧ್ಯಾನ್ ಚಂದ್ ಗೆ ಪ್ರಧಾನಿ ನಮನ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ 110ನೇ ಹುಟ್ಟುಹಬ್ಬದ ಅಂಗವಾಗಿ ಗೌರವ ನಮನ ಸಲ್ಲಿಸಿದ್ದು...

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ 110ನೇ ಹುಟ್ಟುಹಬ್ಬದ ಅಂಗವಾಗಿ ಗೌರವ ನಮನ ಸಲ್ಲಿಸಿದ್ದು, ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ದೇಶದ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದ್ದಾರೆ.
ಧ್ಯಾನ್ ಚಂದ್ ಹುಟ್ಟುಹಬ್ಬ ದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ನಮ್ಮ ದೇಶದ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸುತ್ತೇನೆ. ಮುಂದಿನ ದಿನಗಳಲ್ಲಿ ಅವರಲ್ಲಿ ಇನ್ನಷ್ಟು ಚೈತನ್ಯ ಹೆಚ್ಚಾಗಲಿ ಎಂದು ಆಶಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಲವು ಕ್ರೀಡಾಪಟುಗಳಿಗೆ ರಾಷ್ಟ್ರೀಯ ಕ್ರೀಡಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತಿದೆ.
ಆದಸ್ಟ್ 29, 1905ರಲ್ಲಿ ಜನಿಸಿದ್ದ ಧ್ಯಾನ್ ಚಂದ್ ಸಾರ್ವಕಾಲಿಕ ಶ್ರೇಷ್ಠ ಹಾಕಿ ಆಟಗಾರ ಎಂದು ಪರಿಗಣಿಸಲಾಗುತ್ತದೆ. ಅವರು ಭಾರತಕ್ಕೆ ಮೂರು ಬಾರಿ 1928, 1932 ಮತ್ತು 1936ರ ಒಲಿಂಪಿಕ್ಸ್ ನಲ್ಲಿ ಚಿನ್ನ ತಂದುಕೊಟ್ಟಿದ್ದರು. ಚೆಂಡನ್ನು ನಿಭಾಯಿಸುತ್ತಿದ್ದ ರೀತಿಯಿಂದ ಮಾಂತ್ರಿಕ ಎಂದು ಕರೆಯಲಾಗುತ್ತಿತ್ತು.ಧ್ಯಾನ್ ಚಂದ್ ಅಂತಿಮ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದು 1948ರಲ್ಲಿ. ಅವರು ತಮ್ಮ ವೃತ್ತಿ ಜೀವನದಲ್ಲಿ 400 ಗೋಲುಗಳನ್ನು ಗಳಿಸಿದ್ದರು.
ಮೇಜರ್ ಧ್ಯಾನ್ ಚಂದ್ 1979, ಡಿಸೆಂಬರ್ 3ರಂದು ಸಾವನ್ನಪ್ಪಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


