ಒಆರ್‌ಒಪಿ ಪ್ರತಿಭಟನೆ, ಮತ್ತೊಬ್ಬ ಹಿರಿಯ ನಿವೃತ್ತ ಯೋಧ ಆಸ್ಪತ್ರೆಗೆ ದಾಖಲು
'ಸಮಾನ ಹುದ್ದೆ, ಸಮಾನ ಪಿಂಚಣಿ' ಯೋಜನೆ ಜಾರಿಗೆ ಆಗ್ರಹಿಸಿ ನಿವೃತ್ತ...

ನವದೆಹಲಿ: 'ಸಮಾನ ಹುದ್ದೆ, ಸಮಾನ ಪಿಂಚಣಿ' ಯೋಜನೆ ಜಾರಿಗೆ ಆಗ್ರಹಿಸಿ ನಿವೃತ್ತ ಸೈನಿಕರು ನಡೆಸುತ್ತಿರುವ ನಿರಶನ ತೀವ್ರ ಸ್ವರೂಪ ಪಡೆಯುತ್ತಿದ್ದು, ಶನಿವಾರ ಪ್ರತಿಭಟನಾ ನಿರತ ಮತ್ತೊಬ್ಬ ಮಾಜಿ ಸೈನಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
'ಹವಿಲ್ದಾರ್ ಅಭಿಲಾಶ್ ಸಿಂಗ್ ಎಂಬ ನಿವೃತ್ತ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಮಾಜಿ ಸೈನಿಕರ ಒಕ್ಕೂಟದ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕು ಮುನ್ನ ನಿರಶನ ಮಾಡುತ್ತಿದ್ದ ನಾಲ್ವರು ನಿವೃತ್ತ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗರುವಾರ ರಾತ್ರಿ ಒಆರ್‌ಒಪಿಗೆ ಸಂಬಂಧಿಸಿ ನಡೆದ ಮಾತುಕತೆಯೂ ವಿಫಲವಾಗಿದ್ದು, ನಿವೃತ್ತ ಸೈನಿಕರು ನಡೆಸುತ್ತಿರುವ ಪ್ರತಿಭಟನೆ 76ನೇ ದಿನಕ್ಕೆ ಕಾಲಿಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


