ದೇಶ

ಇಂದ್ರಾಣಿ ಮುಖರ್ಜಿ ಪೊಲೀಸ್ ಕಸ್ಟಡಿ ಸೆ.5 ವರೆಗೆ ವಿಸ್ತರಣೆ

ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿಯ ಅವದ್ಧಿಯನ್ನು ಸೆ.5 ವರೆಗೆ ವಿಸ್ತರಿಸಲಾಗಿದೆ.

ಇಂದ್ರಾಣಿ ಮುಖರ್ಜಿ ಪೊಲೀಸ್ ಕಸ್ಟಡಿ ಸೆ.5 ವರೆಗೆ ವಿಸ್ತರಣೆ
ಇಂದ್ರಾಣಿ ಮುಖರ್ಜಿ
Published On :

ಮುಂಬೈ: ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿಯ ಅವಧಿಯನ್ನು ಸೆ.5 ವರೆಗೆ ವಿಸ್ತರಿಸಲಾಗಿದೆ.

ಪ್ರಮುಖ ಆರೋಪಿಗಳಾದ ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಹಾಗೂ ಕಾರು ಚಾಲಕ ಶ್ಯಾಮ್ ರೈ ಪೊಲೀಸ್ ಕಸ್ಟಡಿ ಆ.31 ಕ್ಕೆ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಮುಂಬೈ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆ ನಡೆಸಬೇಕಿರುವುದರಿಂದ ಕಸ್ಟಡಿ ಅವಧಿಯನ್ನು ವಿಸ್ತರಿಸಲು ಮನವಿ ಸಲ್ಲಿಸಲಾಗಿತ್ತು.

ಸಂಜೀವ್ ಖನ್ನಾ ಅವರ ಪಾಸ್ ಪೋರ್ಟ್ ನ್ನು ಮುಂಬೈ ಪೊಲೀಸರು ವಶಪಡಿಸಿಕೊಳ್ಳಬೇಕಿದ್ದು, ಕೊಲೆ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕಿದೆ. ಕೋರ್ಟ್ ಗೆ ಹಾಜರುಪಡಿಸಿದ ವೇಳೆ ಇಂದ್ರಾಣಿ ಮುಖರ್ಜಿ ಅಸ್ವಸ್ಥಗೊಂಡ ಘಟನೆಯೂ ನಡೆದಿದೆ.  ಶೀನಾ ಬೋರಾ ಕೊಲೆ ಪ್ರಕರಣ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು  ಇಂದ್ರಾಣಿ ಮುಖರ್ಜಿ ಅವರ ಹಣಕಾಸು ವ್ಯವಹಾರಗಳ ಬಗ್ಗೆಯೂ ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.