ದೇಶ

ಇಂದ್ರಾಣಿ ಮುಖರ್ಜಿ ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ

ಶೀನಾ ಬೋರಾಳ ತಾಯಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಸೆಪ್ಟೆಂಬರ್ 5ರವರೆಗೆ...

ಇಂದ್ರಾಣಿ ಮುಖರ್ಜಿ ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ
ಮುಂಬೈಯ ಖಾರ್ ಪೊಲೀಸ್ ಠಾಣೆಗೆ ಇಂದ್ರಾಣಿ ಮುಖರ್ಜಿಯನ್ನು ಕರೆದೊಯ್ಯುತ್ತಿರುವುದು.
Published On :

ಮುಂಬೈ: ಶೀನಾ ಬೋರಾಳ ತಾಯಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಸೆಪ್ಟೆಂಬರ್ 5ರವರೆಗೆ ವಿಸ್ತರಿಸಲಾಗಿದೆ.

ಇಂದು ಬಾಂದ್ರಾ  ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಇಂದ್ರಾಣಿ ಮುಖರ್ಜಿ, ಆಕೆಯ ಮಾಜಿ ಪತಿ ಸಂಜೀವ್ ಖನ್ನಾ ಹಾಗೂ ಕಾರು ಚಾಲಕ ಶ್ಯಾಮ್ ರೈಯನ್ನು ವಿಚಾರಣೆಗೆ ಹಾಜರುಪಡಿಸಲಾಯಿತು.ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಿ ಮತ್ತಷ್ಟು ಮಾಹಿತಿಯನ್ನು ಹೊರತೆಗೆಯಬೇಕಿದೆ. ಅದಕ್ಕಾಗಿ ಬಂಧನವನ್ನು ವಿಸ್ತರಿಸುವಂತೆ  ಮುಂಬೈ ಪೊಲೀಸರು ಮಾಡಿರುವ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಪೊಲೀಸ್ ಕಸ್ಟಡಿಯ ವಿಸ್ತರಣೆಗೆ ಅವಕಾಶ ನೀಡಿದೆ.

ಆರೋಪಿಗಳು ಈಗ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.