ಮೋದಿ ವಿರೋಧಿಗಳ ವಿರುದ್ಧದ ಟೀಕೆ ಬಿಜೆಪಿ ಪ್ರಾಯೋಜಿತವಲ್ಲ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ
ಪ್ರಧಾನಿ ನರೇಂದ್ರ ಮೋದಿ ಅವರ ಟೀಕಾಕಾರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ವಾಗ್ದಾಳಿ ನಡೆಯುತ್ತಿರುವುದರ ಬಗ್ಗೆ ಬಿಜೆಪಿ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಅರವಿಂದ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಟೀಕಾಕಾರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ವಾಗ್ದಾಳಿ ನಡೆಯುತ್ತಿರುವುದರ ಬಗ್ಗೆ ಬಿಜೆಪಿ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಅರವಿಂದ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ.
ಮೋದಿ ಹಾಗೂ ಅವರ ನೀತಿಗಳನ್ನು ಟೀಕಿಸುವವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ವಾಗ್ದಾಳಿ ಬಿಜೆಪಿ ಪ್ರಾಯೋಜಿತವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಿಂದ ಮೋದಿ ಬೆಂಬಲಿಗರು ಮೋದಿ ವಿರೋಧಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಳ್ಳುವ ಪ್ರವೃತ್ತಿ ಪ್ರಾರಂಭವಾಗಿದ್ದು, ಕೇಂದ್ರ ಸರ್ಕಾರವನ್ನು ಟೀಕಿಸಿದ ಬೆನ್ನಲ್ಲೇ ನೂರಾರು ಬೆಂಬಲಿಗರು ಟೀಕಾಕಾರರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಐಎನ್ ಎಸ್ ಗೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರವಿಂದ್ ಗುಪ್ತಾ, ಮೋದಿ ವಿರೋಧಿಗಳ ವಿರುದ್ಧ ವ್ಯಕ್ತವಾಗುತ್ತಿರುವ ಟೀಕೆಗೆ ಬಿಜೆಪಿ ಕಾರಣವಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ನಿಯಂತ್ರಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೆಲವೊಮ್ಮೆ ಸರ್ಕಾರದ ಕ್ರಮಗಳ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕಾಗುತ್ತದೆ. ಸರ್ಕಾರದ ನಿರ್ಧಾರಗಳ ಬಗ್ಗೆ ತಪ್ಪು ಮಾಹಿತಿ ಹರಡುವ ವಿರೋಧಿಗಳಿಗೆ ತಕ್ಕ ಪ್ರತ್ಯುತ್ತರ ನೀಡಾಬೇಕಾಗುತ್ತದೆ. ಬಿಜೆಪಿ ಅದಕ್ಕಾಗಿ ಮಾತ್ರ ಸಾಮಾಜಿಕ ಜಾಲತಾಣವನ್ನು ಬಳಸುತ್ತಿದೆ. ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ವಿರೋಧಿಗಳಿಗೆ ಉತ್ತರಿಸುವ ಶೈಲಿ ಹೊಂದಿರುತ್ತಾರೆ. ಅದರಲ್ಲಿ ಯಾರು ಬಿಜೆಪಿಯವರು ಯಾರು ಬಿಜೆಪಿಯವರಲ್ಲ ಎಂಬುದನ್ನು ಗುರುತಿಸುವುದು ಕಷ್ಟ ಎಂದು ಅರವಿಂದ್ ಗುಪ್ತಾ ಹೇಳಿದ್ದಾರೆ.
ಬಿಜೆಪಿ/ ಮೋದಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾರ್ಗಸೂಚಿಗಳನ್ನು ಪಾಲಿಸಬೇಕು, ಮತ್ತೊಬ್ಬರನ್ನು ಟೀಕಿಸುವಾಗ ಕನಿಷ್ಠ ಶಿಷ್ಟಾಚಾರವನ್ನು ಪಾಲಿಸುವಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ತಮ್ಮ ಅನುಯಾಯಿಗಳಿಗೆ ಕರೆ ನೀಡಿದ್ದಾರೆ. ಆದರೂ ಮೋದಿ ಅಭಿಮಾನಿಗಳು ಮೋದಿ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ತಡೆಗಟ್ಟುವುದು ಕಷ್ಟ ಸಾಧ್ಯ ಎಂದು ಅರವಿಂದ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


