ಭಾಷಣ ನಿಲ್ಲಿಸಿ, ಭರವಸೆ ಈಡೇರಿಸಿ: ಮೋದಿಗೆ ನಿತೀಶ್ ಕುಮಾರ್
ತಮ್ಮ ವಾಕ್ಚಾತುರ್ಯ ಪ್ರದರ್ಶಿಸುತ್ತಿರುವ ಮೋದಿ ಅವರು ಮೊದಲು ತಮ್ಮ ಭಾಷಣ ನಿಲ್ಲಿಸಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...

ಪಾಟ್ನ: ತಮ್ಮ ವಾಕ್ಚಾತುರ್ಯ ಪ್ರದರ್ಶಿಸುತ್ತಿರುವ ಮೋದಿ ಅವರು ಮೊದಲು ತಮ್ಮ ಭಾಷಣ ನಿಲ್ಲಿಸಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ ನಿಮಿತ್ತ ಪಾಟ್ನದ ಭಾಗಲ್ಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣದ ಕುರಿತಂತೆ ವಿರೋಧ ವ್ಯಕ್ತಪಡಿಸಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೋದಿ ಅವರು ಬಿಹಾರದ ಜನತೆಯ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೋದಿ ಈಗಾಲಾದರು ನೈತಿಕತೆಯನ್ನು ಪ್ರದರ್ಶಿಸಬೇಕಿದ್ದು, ಈ ಹಿಂದೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಹೇಳಿದ್ದಾರೆ.
ಹಳೇ ಯೋಜನೆಗಳಿಗೆ ಹೊಸ ಹೆಸರು ನೀಡಿ ಪ್ಯಾಕೇಜ್ ನೀಡುತ್ತೇವೆಂಬ ಸುಳ್ಳು ಭರವಸೆಗಳನ್ನು ಬಿಹಾರ ಜನತೆ ನೀಡುವ ಬದಲು ಮೋದಿ ಅವರು, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿ ಬಿಹಾರದ ವಿರುದ್ಧ ನೀಡಿದ್ದ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


