ದೇಶ

ಪ್ರತಿ ವರ್ಷ ರಸ್ತೆ ಅಪಘಾತಕ್ಕೆ ದೇಶದಲ್ಲಿ 1.5 ಲಕ್ಷ ಜನ ಬಲಿ

ಪ್ರತಿ ವರ್ಷ ಐದು ಲಕ್ಷ ರಸ್ತೆ ಅಪಘಾತ ನಡೆಯುತ್ತಿದ್ದು, ದೇಶದಲ್ಲಿ 1.5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಪ್ರತಿ ವರ್ಷ ರಸ್ತೆ ಅಪಘಾತಕ್ಕೆ ದೇಶದಲ್ಲಿ 1.5 ಲಕ್ಷ ಜನ ಬಲಿ
ನಿತಿನ್ ಗಡ್ಕರಿ
Published On :

ನವದೆಹಲಿ:  ಪ್ರತಿವರ್ಷ ಐದು ಲಕ್ಷ ರಸ್ತೆ ಅಪಘಾತ ನಡೆಯುತ್ತಿದ್ದು, ದೇಶದಲ್ಲಿ 1.5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದಾರೆ.

ಇಷ್ಟೊಂದು ಪ್ರಮಾಣದ ಅಪಘಾತಗಳ ಫಲವಾಗಿ ದೇಶದ ಬೊಕ್ಕಸಕ್ಕೆ ವಾರ್ಷಿಕವಾಗಿ 55 ಸಾವಿರ ಕೋಟಿ ರೂ. ಹೊರೆ ಬೀಳುತ್ತಿದ್ದು, ಇದು ದೇಶದ ಜಿಡಿಪಿಯ ಶೇ.3ರಷ್ಟು ಎಂದು ಪ್ರಶ್ನೋತ್ತರ ವೇಳೆಯಲ್ಲಿ ಹೇಳಿದರು.

"ಪ್ರತಿ ವರ್ಷ ದೇಶದಲ್ಲಿ ಸುಮಾರು 5 ಲಕ್ಷ ರಸ್ತೆ ಅಪಘಾತಗಳಲ್ಲಿ 1.5 ಲಕ್ಷ ಜನರು ಸಾಯುತ್ತಿದ್ದಾರೆ" ಎಂದು ಗಡ್ಕರಿ ವಿವರ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.