ಛೋಟಾ ರಾಜನ್ ನ್ಯಾಯಾಂಗ ಬಂಧನ ಡಿ.15 ರವರೆಗೆ ವಿಸ್ತರಣೆ
ಭೂಗತ ಪಾತಕಿ ಛೋಟಾ ರಾಜನ್ ನ್ಯಾಯಾಂಗ ಬಂಧನ ಅವಧಿಯನ್ನೂ ಡಿಸೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ...

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ನ್ಯಾಯಾಂಗ ಬಂಧನ ಅವಧಿಯನ್ನೂ ಡಿಸೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.
ತಿಹಾರ ಜೈಲಿನಲ್ಲಿರುವ ಛೋಟಾ ರಾಜನ್ ನನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಸಿಬಿಐ ವಿಶೇಷ ಕೋರ್ಟ್ ನ ಜಡ್ಜ್ ವಿನೋದ್ ಕುಮಾರ್ ರಾಜನ್ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.15 ರವರೆಗೆ ವಿಸ್ತರಿಸಿ ಆದೇಶಿಸಿದರು.
ಛೋಟಾ ರಾಜನ್ ಗೆ ವಿರೋಧಿಗಳಿಂದ ಕೊಲೆ ಬೆದರಿಕೆ ಇರುವ ಕಾರಣ, ಸಿಬಿಐ ಅಧಿಕಾರಿಗಳು ಆತನನ್ನು ನ್ಯಾಯಲಯಕ್ಕೆ ಖುದ್ದು ಹಾಜರು ಪಡಿಸಲಿಲ್ಲ. ತಿಹಾರ ಜೈಲಿನಲ್ಲಿ ರಾಜನ್ ಗೆ ಅತಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


