ದೇಶ

ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಹೊಸ ಫಾರ್ಮುಲಾ: ವಾರದಲ್ಲಿ 3 ದಿನ ಮಾತ್ರ ಖಾಸಗಿ ವಾಹನ ಸಂಚಾರ

ಪ್ರತಿ ನಿತ್ಯ ಸಂಚರಿಸುವ ಖಾಸಗಿ ವಾಹನಗಳಿಗೆ ದಿನ ಬಿಟ್ಟು ದಿನ ಅಂದರೆ ವಾರದಲ್ಲಿ ಮೂರು ದಿನ ಮಾತ್ರ ಬಳಸಲು ಅನುಮತಿ ನೀಡಲು ನಿರ್ಧರಿಸಿದೆ...

ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಹೊಸ ಫಾರ್ಮುಲಾ: ವಾರದಲ್ಲಿ 3 ದಿನ ಮಾತ್ರ ಖಾಸಗಿ ವಾಹನ ಸಂಚಾರ
ದೆಹಲಿಯ ಪರಿಸರ ಮಾಲಿನ್ಯ
Published On :

ನವದೆಹಲಿ; ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಹಿನ್ನೆಲೆಯಲ್ಲಿ ಹೈಕೋರ್ಟ್ ಆಪ್ ಸರ್ಕಾರಕ್ಕೆ ತಪರಾಕಿ ಹಾಕಿದ ಹಿನ್ನೆಲೆಯಲ್ಲಿ, ವಾಯುಮಾಲಿನ್ಯ ನಿಯಂತ್ರಿಸಲು ಹೊಸ ಯೋಜನೆ ರೂಪಿಸಿದೆ.

ಪ್ರತಿ ನಿತ್ಯ ಸಂಚರಿಸುವ ಖಾಸಗಿ ವಾಹನಗಳಿಗೆ ದಿನ ಬಿಟ್ಟು ದಿನ ಅಂದರೆ ವಾರದಲ್ಲಿ ಮೂರು ದಿನ ಮಾತ್ರ ಬಳಸಲು ಅನುಮತಿ ನೀಡಲು ನಿರ್ಧರಿಸಿದೆ. ಜನವರಿ 1 ರಿಂದ ಈ ನಿಯಮ ಜಾರಿಗೆ ಬರಲಿದ್ದು, ಸಮಸಂಖ್ಯೆ ನೋಂದಣಿ ವಾಹನಗಳು ವಾರದಲ್ಲಿ ಮೂರು ದಿನ, ಬೆಸ ಸಂಖ್ಯೆ ನೋಂದಣಿ ವಾಹನಗಳು ವಾರದ ಮತ್ತೊಂದು ಮೂರು ದಿನದಲ್ಲಿ ,ಸಂಚರಿಸುವಂತೆ ನಿಯಮ ಜಾರಿಗೆ ತರಲಾಗುತ್ತದೆ.

ದೆಹಲಿಯ ಆಪ್ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಈ ಹೊಸ ನಿಯಮ ಸಾರ್ವಜನಿಕೆ ವಾಹನಗಳಿಗೆ ಅನ್ವಯವಾಗುವುದಿಲ್ಲ. ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಾಯು ಮಾಲಿನ್ಯ  ನಿಯಂತ್ರಿಸುವ ಸಲುವಾಗಿ ಹೊರ ರಾಜ್ಯಗಳಿಂದ ಬರುವ ವಾಹನಗಳಿಗೂ ಈ ನಿಯಮ ಅನ್ವಯಿಸಲು ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಮಾಲಿನ್ಯ ಕಡಿಮೆ ಮಾಡುವ ದೃಷ್ಟಿಯಿಂದ ದಕ್ಷಿಣ ದೆಹಲಿಯಲ್ಲಿರುವ ಕಲ್ಲಿದ್ದಲು ಆಧಾರಿತ ಎನ್ ಟಿ ಪಿಸಿ ಬದಾರ್ ಪುರ್ ಪವರ್ ಪ್ಲಾಂಟ್ ಮುಚ್ಚಲು ಸರ್ಕಾರ ಚಿಂತನೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.