ದೇಶ

ಪೂಜೆ ಸಲ್ಲಿಸಲು ಮಹಿಳೆಗೆ ನಿರಾಕರಣೆ: ನಿಲುವು ಸಮರ್ಥಿಸಿಕೊಂಡ ಬಿಜೆಪಿ ಸಚಿವೆ

ಮಹಾರಾಷ್ಟ್ರದಲ್ಲಿರುವ ಶನಿ ದೇವಸ್ಥಾನವೊಂದರಲ್ಲಿ ಮಹಿಳೆಯರು ಪೂಜೆ ಸಲ್ಲಿಸಲು ನಿರಾಕರಿಸಿರುವುದನ್ನು ಬಿಜೆಪಿ ಗ್ರಾಮೀಣಾಭಿವೃದ್ಧಿ...

ಪೂಜೆ ಸಲ್ಲಿಸಲು ಮಹಿಳೆಗೆ ನಿರಾಕರಣೆ: ನಿಲುವು ಸಮರ್ಥಿಸಿಕೊಂಡ ಬಿಜೆಪಿ ಸಚಿವೆ
ಪಂಕಜ ಮುಂಡೆ
Published On :
ಮುಂಬೈ: ಮಹಾರಾಷ್ಟ್ರದಲ್ಲಿರುವ ಶನಿ ದೇವಸ್ಥಾನವೊಂದರಲ್ಲಿ ಮಹಿಳೆಯರು ಪೂಜೆ ಸಲ್ಲಿಸಲು ನಿರಾಕರಿಸಿರುವುದನ್ನು ಬಿಜೆಪಿ ಗ್ರಾಮೀಣಾಭಿವೃದ್ಧಿ ಸಚಿವೆ ಪಂಕಜ ಮುಂಡೆ ಸಮರ್ಥಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಅಹ್ಮದ್ ನಗರ ಜೆಲ್ಲಿಯ ಶನಿ ಶಿಂಗ್ನಾಪುರ್ ದೇವಾಲಯದಲ್ಲಿ ಮಹಿಳೆಯರು ಪೂಜೆ ಸಲ್ಲಿಸುವುದನ್ನು ನಿರಾಕರಿಸಲಾಗಿದೆ. ಇದಕ್ಕೆ ಪ್ರತಿಕ್ರಯಿಸಿರುವ ಸಚಿವೆ ಪಂಕಜ, ಸಾಂಪ್ರದಾಯಿಕ ಆಚರಣೆಗಳಿಗೆ ಮಹಿಳೆಯ ಅವಮಾನದ ನಂಟನ್ನು ಕಲ್ಪಿಸಕೂಡದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆದರೆ, ಪಂಕಜ ಅವರ ಹೇಳಿಕೆಗೆ ಎನ್ ಸಿಪಿ ವಿರೋಧ ವ್ಯಕ್ತಪಡಿಸಿದೆ. ಶನಿ ದೇವಸ್ಥಾನದಲ್ಲಿ ಮಹಿಳೆಯರು ಪೂಜೆ ಮಾಡಲು ಅವಕಾಶ ನಿರಾಕರಿಸಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಮಹಿಳಾ ಸಂಘಟನೆಗಳು ಹೋರಾಟ ನಡೆಸಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.