ದೇಶ

ಮುಂದುವರೆದ ರಕ್ಷಣಾ ಕಾರ್ಯ, ಚೆನ್ನೈ ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ

ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುವ ಸೂಚನೆ ನಶಿಸಿದ್ದು, ಚೆನ್ನೈನಲ್ಲಿ ಮತ್ತೆ ಮಳೆ ಬರುತ್ತಿದೆ...

ಮುಂದುವರೆದ ರಕ್ಷಣಾ ಕಾರ್ಯ, ಚೆನ್ನೈ ಸೇರಿ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ
ಚೆನ್ನೈ ಪ್ರವಾಹ
Published On :
ಚೆನ್ನೈ: ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುವ ಸೂಚನೆ ನಶಿಸಿದ್ದು, ಚೆನ್ನೈನಲ್ಲಿ ಮತ್ತೆ ಮಳೆ ಬರುತ್ತಿದೆ. 
ಬೆಳಗ್ಗೆಯಿಂದ ಮಳೆ ನಿಂತಿದ್ದು, ಹಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಆದರೆ ಮತ್ತೆ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ನೀರಿನ ಮಟ್ಟ ಹೆಚ್ಚುತ್ತಿದ್ದು ಮನೆಬಿಟ್ಟು ಹೊರಬರದಂತೆ ಸರ್ಕಾರ ಸೂಚಿಸಿದೆ. ಅಲ್ಲದೆ ಮಳೆಯಿಂದಾಗಿ ಚೆನ್ನೈ ಮಹಾನಗರ ಹಲವು ಕಡೆ ವಿದ್ಯುತ್ ಸ್ಧಗಿತಗೊಳಿಸಲಾಗಿದೆ. ಮಳೆಯ ನಡುವೆಯೂ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದು, ಸಾವಿರಾರು ಜನರನ್ನು ರಕ್ಷಿಸಿದೆ.
ಚೆನ್ನೈ ಸೇರಿದಂತೆ ಇತರ ಜಿಲ್ಲೆಗಳಲ್ಲೂ ಮಳೆ ಸುರಿಯುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಭೀತಿ ಎದುರಾಗಿದೆ. ಪುದುಚೇರಿ, ನಾಗಪಟ್ಟಣಂ, ಕಡಲೂರು, ತಿರುನಲ್ವೇಲಿ, ಮಧುರೈ ಕಾಂಚಿಪುಂರ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ.
ಉಚಿತ ಬಸ್ ಸೇವೆಗೆ ಸರ್ಕಾರ ಚಿಂತನೆ
ಮತ್ತೆ ಮಳೆ ಬರುತ್ತಿರುವುದರಿಂದ ಚೆನ್ನೈನಿಂದ ಹೊರಹೋಗುವವರಿಗೆ ಉಚಿತ ಬಸ್ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಚಿಂತನೆ ನಡೆಸಿದೆ. ಕೊಯಂಬೇಡು ಬಸ್ ನಿಲ್ದಾಣದಲ್ಲಿ ಸುಮಾರು 7 ಸಾವಿರ ಜನ ಬಸ್ ಗಳಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.