ದೇಶ

ನಿತೀಶ್ ಕುಮಾರ್ ಭೇಟಿ ಮಾಡಿದ ಬಿಲ್ ಗೇಟ್ಸ್

ಮೈಕ್ರೋಸಾಫ್ಟ್ ಸಂಸ್ಥಾಪಕ ಹಾಗೂ ಜಗತ್ತಿನ ಶ್ರೀಮಂತ ವ್ಯಕ್ತಿಗಳಲ್ಲೊಬ್ಬರಾದ ಬಿಲ್ ಗೇಟ್ಸ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ...

ನಿತೀಶ್ ಕುಮಾರ್ ಭೇಟಿ ಮಾಡಿದ ಬಿಲ್ ಗೇಟ್ಸ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ (ಸಂಗ್ರಹ ಚಿತ್ರ)
Published On :

ಪಾಟ್ನ: ಮೈಕ್ರೋಸಾಫ್ಟ್ ಸಂಸ್ಥಾಪಕ ಹಾಗೂ ಜಗತ್ತಿನ ಶ್ರೀಮಂತ ವ್ಯಕ್ತಿಗಳಲ್ಲೊಬ್ಬರಾದ ಬಿಲ್ ಗೇಟ್ಸ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.

ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸಕ್ಕೆ  ಭೇಟಿ ನೀಡಿರುವ ಬಿಲ್ ಗೇಟ್ಸ್ ಅವರು, ಈಗಾಗಲೇ ಆರೋಗ್ಯ, ಶಿಕ್ಷಣ, ಮಾನವ ಅಭಿವೃದ್ಧಿ ಹಾಗೂ ಇನ್ನಿತರೆ ಕ್ಷೇತ್ರಗಳ ಕುರಿತಂತೆ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬಿಲ್ ಗೇಟ್ಸ್ ಅವರು ಬಿಹಾರದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಇನ್ನಿತರೆ ಕ್ಷೇತ್ರ ಕುರಿತಂತೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಉಪಕ್ರಮಕ್ಕೆ ಕುರಿತಂತೆ ಮೆಚ್ಚಿಗೆ ವ್ಯಕ್ತಪಡಿಸಿದ್ದು, ಬಿಹಾರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.