ರಾಜನ್ ಔಷಧಿಗಳನ್ನು ತಿಹಾರ್ ಅಧಿಕಾರಿಗಳಿಗೆ ಒಪ್ಪಿಸಿ: ಸಿಬಿಐಗೆ ಹೈ ಕೋರ್ಟ್ ಸೂಚನೆ
ಭೂಗತ ಪಾತಕಿ ಛೋಟಾ ರಾಜನ್ ಗೆ ಸಂಬಂಧಿಸಿದ ಎಲ್ಲಾ ಔಷಧಿಗಳನ್ನು ತಿಹಾರ್ ಜೈಲಿನ ಅಧಿಕಾರಿಗಳಿಗೆ ಒಪ್ಪಿಸಬೇಕೆಂದು ದೆಹಲಿ ಹೈ ಕೋರ್ಟ್ ಸಿಬಿಐ ಅಧಿಕಾರಿಗಳಿಗೆ ಭಾನುವಾರ ಸೂಚನೆ ನೀಡಿದೆ...

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಗೆ ಸಂಬಂಧಿಸಿದ ಎಲ್ಲಾ ಔಷಧಿಗಳನ್ನು ತಿಹಾರ್ ಜೈಲಿನ ಅಧಿಕಾರಿಗಳಿಗೆ ಒಪ್ಪಿಸಬೇಕೆಂದು ದೆಹಲಿ ಹೈ ಕೋರ್ಟ್ ಸಿಬಿಐ ಅಧಿಕಾರಿಗಳಿಗೆ ಭಾನುವಾರ ಸೂಚನೆ ನೀಡಿದೆ.
ಇಂಡೋನೇಷ್ಯಾದಿಂದ ಗಡಿಪಾರು ಮಾಡಿದ ರಾಜನ್ ಅವರನ್ನು ಅಧಿಕಾರಿಗಳಿ ಹಸ್ತಾಂತರ ಮಾಡಲಾಗಿತ್ತು. ಈ ವೇಳೆ ರಾಜನ್ ಗೆ ಸಂಬಂಧಿಸಿದ ವಸ್ತು ಹಾಗೂ ಔಷಧಿಗಳನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ತನಿಖೆಗೆ ರಾಜನ್ ಗೆ ಸಂಬಂಧಿಸಿದ ಔಷಧಿಗಳು ಹಾಗೂ ಬ್ಯಾಗ್ ನಿಂದ ಯಾವುದೇ ಅಗತ್ಯವಿಲ್ಲವಿರುವುದರಿಂದ ಔಷಧಿಗಳನ್ನು ಸಿಬಿಐ ಅಧಿಕಾರಿಗಳು ಮರಳಿ ನೀಡುವಂತೆ ರಾಜನ್ ಅವರ ಪರವಕೀಲ ನ್ಯಾಯಾಲಯದ ಬಳಿ ಮನವಿ ಮಾಡಿದ್ದರು.
ಈ ಮನವಿಯನ್ನು ಪರಿಶೀಲಿಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿನೋದ್ ಕುಮಾರ್ ಅವರು, ರಾಜನ್ ಗೆ ಸಂಬಂಧಿಸಿದ ಔಷಧಿಗಳನ್ನು ಜೈಲಿನ ಅಧಿಕಾರಿಗಳಿಗೆ ಒಪ್ಪಿಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಅಕ್ಟೋಬರ್ 25ರಂದು ಇಂಡೋನೇಷ್ಯಾ ಪೊಲೀಸರು ಬಂಧಿಸಿದ್ದರು. ಇದೀಗ ರಾಜನ್ ಸಿಬಿಐ ಅಧಿಕಾರಗಳ ವಶದಲ್ಲಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


