ಭಾರತೀಯ ಅಂತರ್ಗತ ಮೌಲ್ಯಗಳನ್ನು ನ್ಯಾಯಾಂಗ ರಕ್ಷಿಸುತ್ತದೆ: ಸಿಜೆಐ ನ್ಯಾ.ಟಿಎಸ್ ಠಾಕೂರ್
ಭಾರತೀಯ ಸಮಾಜದ ಅಂತರ್ಗತ ಮೌಲ್ಯಗಳನ್ನು ಕಾಪಾಡಲು ಪ್ರಬಲ ಮತ್ತು ಸ್ವತಂತ್ರ ನ್ಯಾಯಾಂಗದಿಂದ ಸಾಧ್ಯ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾರತೀಯ ಸಮಾಜದ ಅಂತರ್ಗತ ಮೌಲ್ಯಗಳನ್ನು ಕಾಪಾಡಲು ಪ್ರಬಲ ಮತ್ತು ಸ್ವತಂತ್ರ ನ್ಯಾಯಾಂಗದಿಂದ ಸಾಧ್ಯ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನ್ಯಾ.ಠಾಕೂರ್, ನ್ಯಾಯಾಂಗ ಎಲ್ಲಾ ವರ್ಗಗಳ ಹಕ್ಕುಗಳನ್ನು ರಕ್ಷಿಸುತ್ತದೆ. ಸಹಿಷ್ಣುತೆ ಆಧಾರದಲ್ಲೇ ಭಾರತದ ಅಸ್ತಿತ್ವವಿದೆ. ಆದರೆ ಅದನ್ನು ರಾಜಕಾರಣಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ತಿರುಚುತ್ತಿರುವ ಬಗ್ಗೆ ನ್ಯಾ.ಠಾಕೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗ ಭಾರತಿಯ ಸಮಾಜದ ಅಂತರ್ಗತ ಮೌಲ್ಯಗಳನ್ನು ಎಂದಿಗೂ ಕಾಪಾಡುವ ಸಾಮರ್ಥ್ಯ ಹೊಂದಿದ್ದು ಅದು ನ್ಯಾಯಾಂಗದ ಕರ್ತವ್ಯವೂ ಆಗಿದೆ ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ, ಕೆಲವು ಅಸಂಗತ ಘಟನೆಗಳು ನಡೆಯುತ್ತವೆಎಂದು ನ್ಯಾ.ಠಾಕೂರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


