ಹಿಂದೂಗಳ ಕನಸಾಗಿರುವ ರಾಮಮಂದಿರವನ್ನು ಪ್ರಧಾನಿ ಮೋದಿ ನನಸು ಮಾಡಲಿದ್ದಾರೆ: ಪ್ರವೀಣ್ ತೊಗಾಡಿಯಾ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದ ಜನತೆಗೆ ನೀಡಿದ್ದ ಭರವಸೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಾರೆ

ಭೋಪಾಲ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದ ಜನತೆಗೆ ನೀಡಿದ್ದ ಭರವಸೆಯಂತೆಯೇ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
1992 ರಲ್ಲಿ ಡಿ.6 ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಸ್ಥಳದಲ್ಲೇ ಅದ್ಭುತವಾದ ರಾಮ ಮಂದಿರ ನಿರ್ಮಾಣವಾಗಲಿದೆ. ಲೋಕಸಭಾ ಚುನಾವಣೆಗೂ ಮುನ್ನ ನಡೆದಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸೋಮನಾಥ ದೇವಾಲಯದ ಮಾದರಿಯಲ್ಲೇ ರಾಮಮಂದಿರವನ್ನೂ ನಿರ್ಮಿಸುವುದಾಗಿ ಬಿಜೆಪಿ ದೇಶದ ಜನತೆಗೆ ಭರವಸೆ ನೀಡಿತ್ತು, ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆಯನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತೊಗಾಡಿಯಾ ಹೇಳಿದ್ದಾರೆ.
ಪ್ರಧಾನಿ ಮೋದಿ ಹಿಂದುಗಳ ಕನಸನ್ನು ನನಸಾಗಿಸುತ್ತಾರೆ ಎಂಬ ನಂಬಿಕೆ ಇದೆ, ಸರ್ದಾರ್ ಪಟೇಲ್ ಅವರು ಸೋಮನಾಥ ದೇವಾಲಯವನ್ನು ನಿರ್ಮಿಸಿದ ಮಾದರಿಯಲ್ಲೇ ಸಂಸತ್ತಿನಲ್ಲಿ ಶಾಸನ ಮಾಡುವ ಮೂಲಕ ರಾಮಮಂದಿರವೂ ನಿರ್ಮಾಣವಾಗಲಿದೆ ಎಂದು ತೊಗಾಡಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


