ವಿಚಾರವಾದಿಗಳ ಹತ್ಯೆ: ಕೇಂದ್ರ ಗೃಹ ಸಚಿವರ ಹೇಳಿಕೆ ದಾರಿ ತಪ್ಪಿಸುವಂತಿದೆ
ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್, ಎಂ.ಎಂ. ಕಲಬುರ್ಗಿ ಮತ್ತು ಗೋವಿಂದ ಪಾನ್ಸರೆ ಅವರ ಹತ್ಯೆಯ ನಡುವೆ ಸಂಬಂಧವಿಲ್ಲ ಎಂಬ ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಕಿರಣ್ ರಿಜಿಜು..

ನವದೆಹಲಿ: ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್, ಎಂ.ಎಂ. ಕಲಬುರ್ಗಿ ಮತ್ತು ಗೋವಿಂದ ಪಾನ್ಸರೆ ಅವರ ಹತ್ಯೆಯ ನಡುವೆ ಸಂಬಂಧವಿಲ್ಲ ಎಂಬ ಕೇಂದ್ರ ಗೃಹ ಖಾತೆಯ ಸಹಾಯಕ ಸಚಿವ ಕಿರಣ್ ರಿಜಿಜು ಅವರ ಹೇಳಿಕೆಯನ್ನು ದಾಭೋಲ್ಕರ್ ಕುಟುಂಬ ಸಾರಾ ಸಗಟಾಗಿ ತಿರಸ್ಕರಿಸಿದೆ.
ಈ ಹೇಳಿಕೆ ನೀಡುವ ಮೂಲಕ ರಿಜಿಜು ಅವರು, ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಈ ಮೂರು ಹತ್ಯೆಗಳಿಗೂ ಸಂಬಂಧವಿದೆ ಎಂದು ನರೇಂದ್ರ ದಾಭೋಲ್ಕರ್ ಪುತ್ರ ಹಮಿದ್ ದಾಭೋಲ್ಕರ್ ಅವರು ಪ್ರತಿಪಾದಿಸಿದ್ದಾರೆ. ಕಿರಣ್ ರಿಜಿಜು ಅವರು ಯಾವುದೇ ಮಾಹಿತಿಯನ್ನು ಇಟ್ಟುಕೊಂಡು ಮಾತನಾಡಿಲ್ಲ. ಜತೆಗೆ ಅವರು ಸಂಸತ್ ಅನ್ನೂ ದಾರಿ ತಪ್ಪಿಸಿದ್ದಾರೆ. ಆದರೆ ಮೂರು ಹತ್ಯೆಯ ಹಿಂದಿನ ಉದ್ದೇಶವನ್ನು ಮಾತ್ರ ಯಾರೂ ಹೀಗಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ನರೇಂದ್ರ ದಾಭೋಲ್ಕರ್ ಹುಟ್ಟುಹಾಕಿದ್ದ ಮಹಾರಾಷ್ಟ್ರ ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಅವಿನಾಶ್ ಪಟೇಲ್ ಮಾತನಾಡಿ, ``ತನಿಖಾ ಸಂಸ್ಥೆಗಳ ಪ್ರಕಾರ, ಮೂರು ಹತ್ಯೆಗಳನ್ನು ವೈಯಕ್ತಿಕ ಕಾರಣಕ್ಕಾಗಿ ಮಾಡಿಲ್ಲ.
ಆದರೆ ಅವರ ಚಿಂತನೆಗೆ ವಿರುದ್ಧವಾದ ಮತ್ತು ಅವರ ಸಾರ್ವಜನಿಕ ಕೆಲಸಗಳಿಂದಾಗಿಯೇ ಈ ಹತ್ಯೆಗಳನ್ನು ಮಾಡಲಾಗಿದೆ'' ಎಂದು ಹೇಳಿದ್ದಾರೆ. ಡಿ.2 ರಂದು ಗೃಹ ಖಾತೆಯ ಸಹಾಯಕ ಸಚಿವ ಕಿರಣ್ ರಿಜಿಜು ಅವರು, ಈ ಮೂರು ಹತ್ಯೆಗಳ ನಡುವೆ ಸಾಮ್ಯತೆ ಇಲ್ಲ ಎಂದು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


