ದೇಶ

ಆರ್ ಎಸ್ ಎಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಅಜಂ ಖಾನ್

ಉತ್ತರ ಪ್ರದೇಶದದ ಸಚಿವ ಅಜಂ ಖಾನ್ ಆರೆಸ್ಸೆಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಆರ್ ಎಸ್ ಎಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಅಜಂ ಖಾನ್
ಅಜಂ ಖಾನ್
Published On :

ನವದೆಹಲಿ: ಉತ್ತರ ಪ್ರದೇಶದದ ಸಚಿವ ಅಜಂ ಖಾನ್  ಆರೆಸ್ಸೆಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ.

''ಆರೆಸ್ಸೆಸ್ ಸ್ವಯಂ ಸೇವಕರು ದೇಶದಲ್ಲಿ ಕೋಮು ಗಲಭೆಗಳಿಗೆ ಸಂಚು ರೂಪಿಸುವ ಮತ್ತು ಅವುಗಳನ್ನು ವ್ಯವಸ್ಥಿತವಾಗಿ ಹುಟ್ಟುಹಾಕುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆರೆಸ್ಸೆಸ್‌ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು,'' ಎಂದು ಅಜಂ ಖಾನ್ ಆಗ್ರಹಿಸಿದ್ದಾರೆ.

ಅಜಂಖಾನ್ ಹೇಳಿಕೆಗೆ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದೆ.  ''ಕೋಮು ಗಲಭೆ ಸೃಷ್ಟಿಸುವ ಪ್ರಯತ್ನ ಇದಾಗಿದೆ. ಉತ್ತರ ಪ್ರದೇಶ ಸರಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ಒಂದು ವರ್ಗದ ಜನರ ಮನವೊಲಿಕೆಗೆ ಅವರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ಶರ್ಮ ಟೀಕಿಸಿದ್ದಾರೆ.

ಮಾಜಿ ಪ್ರಧಾನಿ ದಿವಂಗತ  ನೆಹರೂ ಅವರಿಂದ ಹಿಡಿದು ಹಿಂದಿನ ಕಾಂಗ್ರೆಸ್ ಪ್ರಧಾನಿಗಳ್ಯಾರೂ ಆರೆಸ್ಸೆಸ್ ಅಪಾಯಕಾರಿ ಎಂದು ಹೇಳದಿರುವಾಗ ಈ ಅಜಂ ಖಾನ್ ಹೀಗೆ ಮಾತನಾಡಲು ಯಾರು?'' ಎಂದು ಪ್ರಶ್ನಿಸಿದ್ದಾರೆ. .

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.