ಮುಂಬೈ ಸರಣಿ ಸ್ಫೋಟ: ಮಾರ್ಚ್‌ನಲ್ಲಿ ಸಂಜಯ್ ದತ್ ಜೈಲಿನಿಂದ ಬಿಡುಗಡೆ
1993ರ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ 1996ರಲ್ಲಿ ಬಂಧನಕೊಳ್ಳಗಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಮಾರ್ಚ್...

ಮುಂಬೈ: 1993ರ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ 1996ರಲ್ಲಿ ಬಂಧನಕೊಳ್ಳಗಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಮಾರ್ಚ್ ಮೊದಲ ವಾರದಲ್ಲಿ ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಂಗಳವಾರ ಅಧಿಕೃತ ಮೂಲಗಳು ತಿಳಿಸಿವೆ.
42 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಜಯ್ ದತ್ ಅವರು ಈಗಾಗಲೇ ಪುಣೆಯ ಯರವಾಡ ಜೈಲಿನಲ್ಲಿ 18 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದು, ಸನ್ನಡತೆ ಆಧಾರದ ಮೇಲೆ ಆರು ತಿಂಗಳು ಮೊದಲೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ನಿಗದಿತ ಅವಧಿ ಪ್ರಕಾರ, 2013ರ ಮೇನಿಂದ ಆರಂಭವಾದ ಸಂಜಯ್ ದತ್ ಅವರ 42 ತಿಂಗಳ ಜೈಲು ಶಿಕ್ಷೆ ಮುಂದಿನ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳಬೇಕಿದೆ.
ಅಪರಾಧಿಯು ತನ್ನ ಜೈಲು ಶಿಕ್ಷೆ ವೇಳೆ ಉತ್ತಮ ನಡತೆ ತೋರಿದರೆ ಅಂಥ ಖೈದಿಗೆ 114 ದಿನಗಳು ಶಿಕ್ಷೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸಂಜಯ್ ದತ್ ಅವರ ಎಲ್ಲ ದಾಖಲೆಗಳನ್ನು ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


