ನಾನು ಇಂದಿರಾ ಗಾಂಧಿ ಸೊಸೆ, ನಾನ್ಯಾರಿಗೂ ಹೆದರಲ್ಲ: ಸೋನಿಯಾ ಗಾಂಧಿ
ನಾನು ಮಾಜಿ ಪ್ರಧಾನಿ ಇಂದಿರಾಗಾಂಧಿ ಸೊಸೆ, ಹೀಗಾಗಿ ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಕಾಂಗ್ರೆಸ್...

Published On :
ನವದೆಹಲಿ: ನಾನು ಮಾಜಿ ಪ್ರಧಾನಿ ಇಂದಿರಾಗಾಂಧಿ ಸೊಸೆ, ಹೀಗಾಗಿ ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣ ಸಂಬಂಧ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತ್ತು. ಈ ಸಂಬಂಧ ಪ್ರತಿಕ್ರಯಿಸಿರುವ ಸೋನಿಯಾ ಗಾಂಧಿ, ಈ ಪ್ರಕರಣ ಸಂಬಂಧ ತೀರ್ಪು ನೀಡುವ ವಿಚಾರ ನ್ಯಾಯಾಧೀಶರಿಗೆ ಸಂಬಂಧಪಟ್ಟಿದ್ದು, ಹೀಗಾಗಿ ನ್ಯಾನಕೆ ಇಂಥಾ ವಿಚಾರಕ್ಕೆ ಭಯಪಡಬೇಕು ಎಂದು ಹೇಳಿದ್ದಾರೆ.
ತಮ್ಮ ವಿರುದ್ಧ ಬಿಜೆಪಿ ರಾಜಕೀಯ ಪಿತೂರಿ ನಡೆಸುತ್ತಿದೆ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ಪ್ರಕಟಣೆ ನಿಲ್ಲಿಸಿರುವ ನ್ಯಾಷನಲ್ ಹೆರಾಲ್ಡ್ ಕಂಪನಿಗೆ ದೇಶದ ವಿವಿಧೆಡೆ 2000 ಕೋಟಿ ರೂ. ಬೆಲೆಬಾಳುವ ಭೂಮಿ ಇದೆ. ಇದನ್ನು ಕಬಳಿಸಲು ಸೋನಿಯಾ, ರಾಹುಲ್ ಅವ್ಯವಹಾರ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಸೋನಿಯಾ ಹಾಗೂ ರಾಹುಲ್ಗೆ 2014ರಲ್ಲಿ ದೆಹಲಿ ವಿಚಾರಣಾಧೀನ ಕೋರ್ಟ್ ಸಮನ್ಸ್ ಕೂಡ ಜಾರಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


