ದೇಶ

ರಾಜಕೀಯ ಮಾಡೋದು ಬಿಡಿ, ಮೊದ್ಲು ಪರಿಹಾರ ತಲುಪಿದ್ಯಾ ನೋಡಿ: ರಾಹುಲ್ ಗಾಂಧಿ

ನಾಯಕರು ರಾಜಕೀಯ ಮಾಡುವುದನ್ನು ಬಿಟ್ಟು, ಪರಿಹಾರಗಳು ಜನತೆಗೆ ತಲುಪುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ...

ರಾಜಕೀಯ ಮಾಡೋದು ಬಿಡಿ, ಮೊದ್ಲು ಪರಿಹಾರ ತಲುಪಿದ್ಯಾ ನೋಡಿ: ರಾಹುಲ್ ಗಾಂಧಿ
ಪಾಂಡಿಚೆರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ (ಫೋಟೋ ಕೃಪೆ: ಎಎನ್ಐ)
Published On :

ಚೆನ್ನೈ: ನಾಯಕರು ರಾಜಕೀಯ ಮಾಡುವುದನ್ನು ಬಿಟ್ಟು, ಪರಿಹಾರಗಳು ಜನತೆಗೆ ತಲುಪುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.

ಕುಂಭದ್ರೋಣ ಮಳೆಯಿಂದಾಗಿ ಚೆನ್ನೈ ನಗರ ಜಲಾವೃತ್ತವಾದ ಹಿನ್ನಲೆಯಲ್ಲಿ ಇಂದು ತಮಿಳುನಾಡಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರೀಕ್ಷೆ ನಡೆಸಿದರು. ಈ ವೇಳೆ ಮಾತನಾಡಿರುವ ಅವರು, ತಮಿಳುನಾಡಿನಲ್ಲಿ ಪ್ರಸ್ತುತ ಇರುವ ಸ್ಥಿತಿಗತಿಗಳನ್ನು ನನ್ನ ಕಣ್ಣಿಂದ ನೋಡಲು ಇಲ್ಲಿಗೆ ಬಂದಿದ್ದೇನೆ. ಪ್ರಸ್ತುತ ತಮಿಳುನಾಡಿನಲ್ಲಿರುವ ಸ್ಥಿತಿಯಲ್ಲಿ ನಾಯಕರು ರಾಜಕೀಯ ಮಾಡುವುದನ್ನು ಬಿಟ್ಟು ಜನರಿಗೆ ಪರಿಹಾರ ನಿಧಿಗಳು ತಲುಪುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಶತಮಾನದ ಭೀಕರ ಕುಂಭದ್ರೋಣ ಮಳೆಯಿಂದ ತತ್ತರಿಸಿರುವ ತಮಿಳುನಾಡಿನಲ್ಲಿ ಸಾಕಷ್ಟು ಹಾನಿಯುಂಟಾಗಿದ್ದು,  ಮಳೆಯಿಂದಾಗಿ ಚೆನ್ನೈ ನಗರಿ ತತ್ತರಿಸಿ ಹೋಗಿದೆ. ಹೀಗಾಗಿ ಪ್ರವಾಹ ಪೀಡಿತ ತಮಿಳುನಾಡಿನಲ್ಲಿ ಸಾಕಷ್ಟು ಪ್ರದೇಶಗಳು ಜಲಾವೃತವಾಗಿದ್ದು, ಶೈಕ್ಷಣಿಕ ಸಂಸ್ಥೆಗಳು, ಶಾಲೆ ಮತ್ತು ಕಾಲೆಗಳಿಗೆ ರಜೆಯನ್ನು ಮುಂದುವರೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.