ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿ.19ಕ್ಕೆ ಖುದ್ದು ಹಾಜರಾಗುವಂತೆ ಸೋನಿಯಾ, ರಾಹುಲ್‌ಗೆ ಸೂಚನೆ

ನ್ಯಾಷನಲ್ ಹೆರಾಲ್ಡ್ ಅವ್ಯವಹಾರ ಪ್ರಕರಣದ ವಿಚಾರಣೆ ಡಿಸೆಂಬರ್ 19ಕ್ಕೆ ಮುಂದೂಡಿಕೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನ್ಯಾಷನಲ್ ಹೆರಾಲ್ಡ್ ಕೇಸ್: ಡಿ.19ಕ್ಕೆ ಖುದ್ದು ಹಾಜರಾಗುವಂತೆ ಸೋನಿಯಾ, ರಾಹುಲ್‌ಗೆ ಸೂಚನೆ
ರಾಹುಲ್‌ ಗಾಂಧಿ - ಸೋನಿಯಾ ಗಾಂಧಿ
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್  ಅವ್ಯವಹಾರ ಪ್ರಕರಣದ ವಿಚಾರಣೆ ಡಿಸೆಂಬರ್ 19ಕ್ಕೆ ಮುಂದೂಡಿಕೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಸೋನಿಯಾ ಹಾಗೂ ರಾಹುಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ನನ್ನ ಕಕ್ಷಿದಾರರು ವಿಚಾರಣೆಗೆ ಹಾಜರಾಗಲು ಸಿದ್ಧರಾಗಿದ್ದಾರೆ. ಆದರೆ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರಾಹುಲ್ ಗಾಂಧಿ ಅವರು ಪ್ರವಾಹ ಪೀಡಿತ ಚೆನ್ನೈಗೆ ತೆರಳಿದ್ದರೆ, ಸೋನಿಯಾ ಗಾಂಧಿ ಅವರು ಕಲಾಪದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ವಿಚಾರಣೆ ಮುಂದೂಡಬೇಕೆಂದು ಮನವಿ ಮಾಡಿಕೊಂಡರು.

ಸಿಂಘ್ವಿ  ಮನವಿಯನ್ನು ಪರಿಗಣಿಸಿದ ಕೋರ್ಟ್, ಡಿ.19ರಂದು ಖುದ್ದು ಹಾಜರಾಗುವಂತೆ ಸೋನಿಯಾ ಹಾಗೂ ರಾಹುಲ್ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.

ಇನ್ನು ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ವರದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸೋನಿಯಾ ಗಾಂಧಿ, ಇದೊಂದು ರಾಜಕೀಯ ಒಳಸಂಚು, ನೀವೇ ನಿರ್ಧರಿಸಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.