ದೇಶ

ಸಂಸತ್ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಕಾಂಗ್ರೆಸ್ ಪಾಪ ಕೃತ್ಯ ಎಸಗುತ್ತಿದೆ: ಬಿಜೆಪಿ

ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಅಸಮಾಧಾವ ವ್ಯಕ್ತಪಡಿಸಿದೆ.

ಸಂಸತ್ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿರುವ ಕಾಂಗ್ರೆಸ್ ಪಾಪ ಕೃತ್ಯ ಎಸಗುತ್ತಿದೆ: ಬಿಜೆಪಿ
ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಸಂಸತ್ ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.
ಗದ್ದಲ ಉಂಟಾಗಿ ರಾಜ್ಯಸಭೆ ಕಲಾಪ ವ್ಯರ್ಥವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಕಾಂಗ್ರೆಸ್ ಪಕ್ಷ ಕೋರ್ಟ್ ಗೆ ಸಂಬಂಧಿಸಿದ ವಿಷಯಗಳಿಗೆ ರಾಜಕೀಯ ಬಣ್ಣ ನೀಡಲು ಯತ್ನಿಸುತಿದೆ ಎಂದು ಆರೋಪಿಸಿದ್ದಾರೆ.
ಸಂಸತ್ ಕಲಾಪಕ್ಕೆ ಅಡ್ಡಿ ಪಡಿಸಿ ಜನರ ನಿರೀಕ್ಷೆಗಳನ್ನು ತಡೆಹಿಡಿಯುತ್ತಿರುವ ಕಾಂಗ್ರೆಸ್ ಪಾಪ ಕೃತ್ಯ ಎಸಗುತ್ತಿದೆ ಎಂದು ನಖ್ವಿ ಟ್ವೀಟ್ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ  ಕೋರ್ಟ್ ಮುಂದೆ ಖುದ್ದು ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಸಮನ್ಸ್ ಜಾರಿ ಮಾಡಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ನಡೆದಿದೆ ಎಂದು ಕಾಂಗ್ರೆಸ್ ಸಂಸದರು ಸಂಸತ್ ನಲ್ಲಿ ಗದ್ದಲ ಉಂಟುಮಾಡಿ ರಾಜ್ಯಸಭಾ ಕಲಾಪ ಸ್ಥಗಿತಗೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.