ರಾಹುಲ್ ಗಾಂಧಿಗೆ ನಿಜವಾಗಲೂ ಧೈರ್ಯವಿದ್ದರೇ ಆರೋಪ ಸಾಬೀತು ಪಡಿಸಲಿ
ಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಧೈರ್ಯವಿದ್ದರೇ ತಾವು ಮಾಡಿರುವ ಆರೋಪವನ್ನು ಸಾಬೀತು ಪಡಿಸಲಿ ಎಂದು ಕೇಂದ್ರ ಸರ್ಕಾರ ಸವಾಲು ಹಾಕಿದೆ....

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಧಾನಿ ಕಾರ್ಯಾಲಯದಿಂದ ನಡೆದಿರುವ ಪಿತೂರಿ ಎಂದು ಆರೋಪಿಸಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಧೈರ್ಯವಿದ್ದರೇ ತಾವು ಮಾಡಿರುವ ಆರೋಪವನ್ನು ಸಾಬೀತು ಪಡಿಸಲಿ ಎಂದು ಕೇಂದ್ರ ಸರ್ಕಾರ ಸವಾಲು ಹಾಕಿದೆ.
ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಶೇ.100ರಷ್ಟು ಪ್ರಧಾನಿ ಕಚೇರಿಯಿಂದ ನಡೆಯುತ್ತಿರುವ ರಾಜಕೀಯ ಪಿತೂರಿ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ, ನಿಜವಾಗಲೂ ರಾಹುಲ್ ಗಾಂಧಿಗೆ ಧೈರ್ಯವಿದ್ದರೇ ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲಿ, ಜೊತೆಗೆ ತಾವು ಮಾಡಿರುವ ಆರೋಪವನ್ನು ಸಾಬೀತು ಪಡಿಸಲಿ, ಅದಕ್ಕೆ ಪೂರಕವಾದ ಸಾಕ್ಷ್ಯಗಳನ್ನು ಒದಗಿಸಲಿ ಎಂದು ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸಂಸತ್ ಕಲಾಪವನ್ನು ಸಮಯವನ್ನು ವ್ಯರ್ತ ಮಾಡುತ್ತಿದೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


