ದೇಶ

ಸಂಸತ್ತಿನಲ್ಲಿ ಮಾರ್ದನಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಸತ್ ನಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ಯುಪಿಎ ಮೈತ್ರೀಕೂಟಗಳ ನಡುವಿನ ಭಾರಿ ವಾಕ್ಸಮರಕ್ಕೆ ಕಾರಣವಾಯಿತು...

ಸಂಸತ್ತಿನಲ್ಲಿ ಮಾರ್ದನಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣ
ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಸತ್ ನಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ಯುಪಿಎ ಮೈತ್ರೀಕೂಟಗಳ ನಡುವಿನ ಭಾರಿ ವಾಕ್ಸಮರಕ್ಕೆ ಕಾರಣವಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಖುದ್ದು ಹಾಜರಾತಿಗೆ ನ್ಯಾಯಾಲಯ ಸೂಚನೆ ನೀಡಿರುವಂತೆಯೇ ಇತ್ತ  ಸಂಸತ್ತಿನಲ್ಲಿ ಈ ವಿಚಾರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಯಿತು. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜು ಖರ್ಗೆ ಅವರು,  ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಳ್ಳುತ್ತಿದೆ. ಪ್ರಸ್ತುತ ಕಾಂಗ್ರೆಸ್ ನಾಯಕರಿಗೆ ಬಂದ ಪರಿಸ್ಥಿತಿ ಮುಂದೆ ಎಲ್ಲ ಪ್ರತಿಪಕ್ಷಗಳ ಮುಖಂಡರಿಗೂ ಬರಬಹದು. ಸರ್ಕಾರದ  ಈ ನಡೆಯನ್ನು ಯಾರೂ ಒಪ್ಪುವುದಿಲ್ಲ. ವಿನಾ ಕಾರಣ ಪ್ರತಿಪಕ್ಷ ಮುಖಂಡರಿಗೆ ನೀವು ಕಿರುಕುಳ ನೀಡುತ್ತಿದ್ದೀರಿ ಎಂದು ಕಿಡಿ ಕಾರಿದರು.

ಖರ್ಗೆ ಅವರಿಗೆ ಉತ್ತರಿಸಿದ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಆಗಬೇಕಿರುವುದು ಏನೂ ಇಲ್ಲ. ನ್ಯಾಯಾಲಯ  ನೀಡಿರುವ ಆದೇಶಕ್ಕೂ ಮತ್ತು ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಪ್ರತಿಪಕ್ಷಗಳು ಈ ಪ್ರಕರಣದಲ್ಲಿ ವಿನಾ ಕಾರಣ ಸರ್ಕಾರವನ್ನು ಎಳೆದು ತರುತ್ತಿದ್ದು, ಇದು ನ್ಯಾಯಾಂಗ  ವ್ಯವಸ್ಥೆಯ ಮೇಲೆ ಪ್ರತಿಪಕ್ಷಗಳು ಬೆದರಿಕೆ ಹಾಕುತ್ತಿರುವಂತೆ ತೋರುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ನೀಡಿದ ಜನಾದೇಶವನ್ನೇ ಒಪ್ಪಿಕೊಳ್ಳದ ಕಾಂಗ್ರೆಸ್ ನಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದು ನಾಯ್ಡು ತಿರುಗೇಟು ನೀಡಿದರು.

ಈ ನಡುವೆ ಕಾಂಗ್ರೆಸ್ ಸದಸ್ಯರೆಲ್ಲ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಹೀಗಾಗಿ ಕಲಾಪವನ್ನು ಕೆಲ ಸಮಯ ಮುಂದೂಡಲಾಗಿತ್ತು.  ಮತ್ತೆ ಕಲಾಪ ಆರಂಭವಾದಗ ಕಾಂಗ್ರೆಸ್ ಸದಸ್ಯರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ, ಮೋದಿ ಅವರ ಸರ್ವಾಧಿಕಾರ ಧೋರಣೆ ಹೆಚ್ಚು ಕಾಲ ನಡೆಯುವುದಿಲ್ಲ ಎಂಬ  ಘೋಷಣೆಗಳನ್ನು ಕೂಗುತಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.