ನ್ಯಾಷನಲ್ ಹೆರಾಲ್ಡ್ ಕೇಸ್: ಪ್ರಧಾನಿ ಪಿತೂರಿ ಆರೋಪ ತಳ್ಳಿಹಾಕಿದ ಸ್ವಾಮಿ
ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಧಾನಿ ಕಚೇರಿಯಿಂದ ನಡೆಯುತ್ತಿರುವ ರಾಜಕೀಯ ಪಿತೂರಿ ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಪ್ರಧಾನಿ ಕಚೇರಿಯಿಂದ ನಡೆಯುತ್ತಿರುವ ರಾಜಕೀಯ ಪಿತೂರಿ ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪವನ್ನು ತಳ್ಳಿಹಾಕಿರುವ ದೂರುದಾರ, ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ, ರಾಹುಲ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೈಲಿಗೆ ಹೋಗುವುದು ನೂರಕ್ಕೆ ನೂರು ಸತ್ಯ ಎಂದಿದ್ದಾರೆ.
ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಒಂದು ರಾಜಕೀಯ ಪಿತೂರಿ ಎಂಬ ಕಾಂಗ್ರೆಸ್ ಆರೋಪವನ್ನು ಸ್ವಾಮಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
'ಪ್ರಕರಣದ ಬಗ್ಗೆ ನಾನು ಯಾವತ್ತೂ ಪ್ರಧಾನಿ ಕಚೇರಿ, ಸರ್ಕಾರ ಅಥವಾ ಬಿಜೆಪಿಗೆ ಮಾಹಿತಿ ನೀಡಿಲ್ಲ' ಎಂದಿದ್ದಾರೆ. ಅಲ್ಲದೆ ಗಾಂಧಿ ಕುಟುಂಬದ ವಿರುದ್ಧದ ಹೋರಾಟಕ್ಕೆ ನನಗೆ ಯಾರ ಬೆಂಬಲವೂ ಬೇಡ ಎಂದು ಸ್ವಾಮಿ ಹೇಳಿದ್ದಾರೆ.
ಯಂಗ್ ಇಂಡಿಯಾ ಟ್ರಸ್ಟ್ ಮೂಲಕ ಅಸೋಸಿಯೇಟೆಡ್ ಜರ್ನಲ್ಸ್ ಸಂಸ್ಥೆಯನ್ನು ವಶಕ್ಕೆ ತೆಗೆದುಕೊಂಡ ಸೋನಿಯಾ, ರಾಹುಲ್ ಹಾಗೂ ಮತ್ತಿತರರು ವಂಚನೆ ಮತ್ತು ಭೂಮಿ ಅತಿಕ್ರಮಣ ಎಸಗಿದ್ದಾರೆಂದು ಸುಬ್ರಮಣ್ಯನ್ ಸ್ವಾಮಿ ಕೋರ್ಟ್‍ಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


