ದೇಶ

ಸಮ-ಬೆಸ ಸಂಖ್ಯೆ ಸಂಚಾರ ನಿಯಮ: ಜ.1 ರಿಂದ ದೆಹಲಿಯಲ್ಲಿ 6 ,000 ಹೆಚ್ಚುವರಿ ಬಸ್ ಕಾರ್ಯನಿರ್ವಹಣೆ

ಜ.1 ರಿಂದ ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ 6 ,000 ಹೆಚ್ಚುವರಿ ಸಾರಿಗೆ ಬಸ್ ಗಳನ್ನು ನಿಯೋಜಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.

ಸಮ-ಬೆಸ ಸಂಖ್ಯೆ ಸಂಚಾರ ನಿಯಮ:  ಜ.1 ರಿಂದ ದೆಹಲಿಯಲ್ಲಿ 6 ,000 ಹೆಚ್ಚುವರಿ ಬಸ್ ಕಾರ್ಯನಿರ್ವಹಣೆ
ದೆಹಲಿ ಬಸ್
Published On :

ನವದೆಹಲಿ: ಜ.1 ರಿಂದ ದೆಹಲಿಯಲ್ಲಿ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ 6 ,000 ಹೆಚ್ಚುವರಿ ಸಾರಿಗೆ ಬಸ್ ಗಳನ್ನು ನಿಯೋಜಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ.
ಜ.1 ರಿಂದ 15 ರವರೆಗೆ ದೆಹಲಿಯಲ್ಲಿ 6 ,000 ಹೆಚ್ಚುವರಿ ಬಸ್ ಗಳು ಸಂಚರಿಸಲಿದೆ ಎಂದು ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ಮಾಹಿತಿ ನೀಡಿದ್ದಾರೆ. 2 ,000 ಕ್ಕೂ ಅಧಿಕ ಸಿಎನ್ ಜಿಸಿ ಶಾಲಾ ಬಸ್ ಗಳಲ್ಲಿ ಶೇ.50 ರಷ್ಟು ಸೀಟ್ ಗಳನ್ನು ಮಹಿಳೆಯರಿಗಾಗಿ ಮೀಸಲಿಡಲಾಗುತ್ತದೆ. ಇದಕ್ಕಾಗಿ ಪುಚ್ಹೋ ಆಪ್ ಗಳನ್ನು ಬಿಡುಗಡೆ ಮಾಡಲಾಗುವುದು ಹಾಗೂ ಡಿಸೆಂಬರ್ 25 ರಿಂದ ಆಪ್ ಗಳನ್ನು ಜನರು ಡೌನ್ ಲೋಡ್ ಮಾಡಬಹುದು ಎಂದು ಎಂದು ರೈ ತಿಳಿಸಿದ್ದಾರೆ.
ಸಮ- ಬೆಸ ವಾಹನ ಸಂಚಾರ ನಿಯಮ ಜಾರಿಯಾದ ನಂತರ ಒಂದೇ ಆಟೋವನ್ನು ಇಬ್ಬರು ಚಾಲಕರು ನಿರ್ವಹಿಸಬಹುದು ಇದರಿಂದಾಗಿ ಆಟೋಗಳು ಅತಿ ಹೆಚ್ಚು ಕಾಲ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಸಚಿವ ಗೋಪಾಲ್ ರೈ ಅಭಿಪ್ರಾಯಪಟ್ಟಿದ್ದಾರೆ. 
ವಾಯುಮಾಲಿನ್ಯ ತಡೆಗಟ್ಟಲು ಜನವರಿ 1ರಿಂದ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸಮ-ಬೆಸ ವಾಹನ ಸಂಚಾರ ನಿಯಮ ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.