ದೇಶ

ಕಾನೂನಿಗೆ ಯಾರೂ ಅತೀತರಲ್ಲ, ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸಲಿ: ಜೇಟ್ಲಿ

ಕಾನೂನಿಗೆ ಅತೀತರಾದವರು ಯಾರೂ ಇಲ್ಲ, ಸಂಸತ್ ನಲ್ಲಿ ಗದ್ದಲ ಉಂಟು ಮಾಡುವ ಬದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸಲಿ

ಕಾನೂನಿಗೆ ಯಾರೂ ಅತೀತರಲ್ಲ, ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸಲಿ: ಜೇಟ್ಲಿ
ಅರುಣ್ ಜೇಟ್ಲಿ
Published On :

ನವದೆಹಲಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಪ್ರಕರಣದಿಂದ ಸಂಸತ್ ಕಲಾಪ ವ್ಯರ್ಥವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, "ರಾಣಿ" ಕಾನೂನಿಗೆ ಉತ್ತರದಾಯಿಯಲ್ಲ ಎಂಬುದನ್ನು ಭಾರತ ಎಂದಿಗೂ ಒಪ್ಪಿಲ್ಲ ಎಂದು ಪರೋಕ್ಷವಾಗಿ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾನೂನಿಗೆ ಅತೀತರಾದವರು ಯಾರೂ ಇಲ್ಲ,  ಸಂಸತ್ ನಲ್ಲಿ ಗದ್ದಲ ಉಂಟು ಮಾಡುವ ಬದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸಲಿ ಎಂದು ಜೇಟ್ಲಿ ಸಲಹೆ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಹಗೆತನ ಸಾಧಿಸುತ್ತಿದೆ ಎಂಬ ಕಾಂಗ್ರೆಸ್ ನ ಆರೋಪವನ್ನು ತಳ್ಳಿಹಾಕಿರುವ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರ ಈ ವರೆಗೂ ದಂಡನಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರಿಗೆ ಸರ್ಕಾರವಾಗಲಿ ಸಂತ್ ಆಗಲಿ ಯಾವುದೇ ರೀತಿ ಸಹಾಯ ಮಾಡಲು ಸಾಧ್ಯವಿಲ್ಲ, ಆದ್ದರಿಂದ ಅವರು ಸಂಸತ್ ನಲ್ಲಿ ಏಕೆ ಗದ್ದಲ ಉಂಟುಮಾಡಬೇಕು ಎಂದು ಜೇಟ್ಲಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.