ದೇಶ

ಬಂಗಾಳ, ಕೇರಳದಲ್ಲಿ ಆರ್ ಎಸ್ಎಸ್ ನ ಕಾರ್ಯಕರ್ತರಿಗೆ ಬಿಜೆಪಿ ಅಧ್ಯಕ್ಷ ಗಾದಿ

2016 ರಲ್ಲಿ ಚುನಾವಣೆ ಎದುರಿಸಲಿರುವ ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಚುನಾವಣೆ ಗೆಲ್ಲಲು ತಂತ್ರ ರೂಪಿಸುತ್ತಿದೆ.

ಬಂಗಾಳ, ಕೇರಳದಲ್ಲಿ ಆರ್ ಎಸ್ಎಸ್ ನ ಕಾರ್ಯಕರ್ತರಿಗೆ ಬಿಜೆಪಿ ಅಧ್ಯಕ್ಷ ಗಾದಿ
ಬಿಜೆಪಿ
Published On :

ನವದೆಹಲಿ: 2016 ರಲ್ಲಿ ಚುನಾವಣೆ ಎದುರಿಸಲಿರುವ ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಚುನಾವಣೆ ಗೆಲ್ಲಲು ತಂತ್ರ ರೂಪಿಸುತ್ತಿದೆ.
ಎರಡು ರಾಜ್ಯಗಳಲ್ಲಿ ಬಿಜೆಪಿ ಘಟಕಕ್ಕೆ ಆರ್ ಎಸ್ ಎಸ್ ನ ದಿಲೀಪ್ ಘೋಷ್ ಹಾಗೂ ಆರ್.ಬಾಲಶಂಕರ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ಚಿಂತನೆ ನಡೆಸಿದೆ. ಘೋಷ್ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದು ಪ್ರಸ್ತುತ ಅಧ್ಯಕ್ಷರಾಗಿರುವ ರಾಹುಲ್ ಸಿನ್ಹಾ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಘೋಷ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಮೂಲತಃ ಪಶ್ಚಿಮ ಬಂಗಾಳದ ಆರ್ ಎಸ್ ಎಸ್ ನ ಪ್ರಚಾರಕರಾಗಿದ್ದ ಘೋಷ್ ಅವರು ಒಂದು ವರ್ಷದ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇನ್ನು ಕೇರಳದಲ್ಲಿ ಬಿಜೆಪಿ ಪಕ್ಷದ ಸಾರಥ್ಯ ವಹಿಸಿರುವ ವಿ ಮುರಳೀಧರನ್ ಅವರ ಅಧಿಕಾರ ಅವಧಿಯು ಮುಕ್ತಾಯಗೊಳ್ಳಲಿದ್ದು, ಆರ್ ಎಸ್ಎಸ್ ನ ಆರ್. ಬಾಲಶಂಕರ್ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ. ಆರ್. ಬಾಲಶಂಕರ್ ಅವರು ಈ ಹಿಂದೆ ಆರ್.ಎಸ್ಎಸ್ ನ ಮುಖವಾಣಿ ಆರ್ಗನೈಸರ್ ನ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.