ಹಿಟ್ ಅಂಡ್ ರನ್: ಕೋರ್ಟ್ ಆದೇಶದ ಪ್ರತಿ ಅಧ್ಯಯನ ನಂತರ ಮುಂದಿನ ನಡೆ; ಫಡ್ನವಿಸ್
2002ರ ಹಿಟ್ ಅಂಡ್ ರನ್ ಪ್ರಕರಣದ ತೀರ್ಪು ಹೊರ ಬಿದ್ದಿದ್ದು, ಕೋರ್ಟ್ ತೀರ್ಪಿನ ಪ್ರತಿಯನ್ನು ಅಧ್ಯಯನದ ಬಳಿಕೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮಹಾರಾಷ್ಟ್ರ...

Published On :
ಮುಂಬೈ: 2002ರ ಹಿಟ್ ಅಂಡ್ ರನ್ ಪ್ರಕರಣದ ತೀರ್ಪು ಹೊರ ಬಿದ್ದಿದ್ದು, ಕೋರ್ಟ್ ತೀರ್ಪಿನ ಪ್ರತಿಯನ್ನು ಅಧ್ಯಯನದ ಬಳಿಕೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ತೀರ್ಪಿನ ಪ್ರತಿ ಅಧ್ಯಯನ ಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ಬಳಿಕ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
2002ರ ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಪೊಲೀಸರ ಶಂಕೆಯ ಮೇರೆಗೆ ನಟ ಸಲ್ಮಾನ್ ಖಾನ್ ರನ್ನು ಶಿಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ ನಟ ಸಲ್ಮಾನ್ ಖಾನ್ ರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಆ ಮೂಲಕ ಸತತ 13 ವರ್ಷಗಳ ಸುದೀರ್ಘ ವಿಚಾರಣೆಗೆ ಬಾಂಬೆ ಹೈಕೋರ್ಟ್ ತೆರೆ ಎಳೆದಿದ್ದು, ನಟ ಸಲ್ಮಾನ್ ಖಾನ್ ದೊಡ್ಡ ರಿಲೀಫ್ ದೊರೆತಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Devendra FadnavisSalman Khanಸಲ್ಮಾನ್ ಖಾನ್ಮಹಾರಾಷ್ಟ್ರMaharashtraತೀರ್ಪುದೇವೇಂದ್ರ ಫಡ್ನವಿಸ್verdictHit And Runಹಿಟ್ ಅಂಡ್ ಹನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


