ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹುಟ್ಟುಹಬ್ಬ: ಶುಭಾಶಯ ಕೋರಿದ ಪ್ರಧಾನಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ 80ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದು...

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ 80ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದು, ಮುಖರ್ಜಿ ಅವರು ದೇಶಕ್ಕೆ ಒಂದು ಅಮೂಲ್ಯವಾದ ಕೊಡುಗೆ ಎಂದು ಹೇಳಿದ್ದಾರೆ.
ನಮ್ಮ ರಾಷ್ಟ್ರಪತಿಗಳಿಗೆ ನಾನು ಹುಟ್ಟುಹಬ್ಬದ ಶುಭಾಶಯಗಳನ್ನು ಪ್ರೀತಿಪೂರ್ವಕವಾಗಿ ತಿಳಿಸುತ್ತೇನೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕೆ ನಾನು ಶುಭ ಹಾರೈಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಸುದೀರ್ಘ ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಪ್ರಣಬ್ ಮುಖರ್ಜಿಯವರು ನಮ್ಮ ದೇಶದ ಅತ್ಯಮೂಲ್ಯ ಕೊಡುಗೆ. ಅವರ ಬುದ್ಧಿವಂತಿಕೆ ಮತ್ತು ಜಾಣತನ ಸಮನಾಗಿದೆ ಎಂದು ಹೇಳಿದ್ದಾರೆ.
ಪ್ರಣಬ್ ಮುಖರ್ಜಿ ಅವರಿಗೆ ರಾಜಕೀಯ ಬದುಕಿನಲ್ಲಿ ಉತ್ತಮ ಸ್ನೇಹಿತರು ಮತ್ತು ಹಿತೈಷಿಗಳು ಇದ್ದಾರೆ ಎಂದು ಪ್ರಧಾನಿ ಮೋದಿ ಹೊಗಳಿದ್ದಾರೆ.ಡಿಸೆಂಬರ್ 11, 1935ರಲ್ಲಿ ಪಶ್ಚಿಮ ಬಂಗಾಳದ ಮಿರಾಟಿಯಲ್ಲಿ ಜನಿಸಿದ ಆರು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


