ದೇಶ

ಗುಡಿಸಲು ತೆರವು ಕಾರ್ಯಾಚರಣೆಗೂ ಮುನ್ನವೇ ಮಗು ಮೃತಪಟ್ಟಿತ್ತು: ರೈಲ್ವೆ ಸಚಿವ ಸುರೇಶ್ ಪ್ರಭು

ನವದೆಹಲಿಯಲ್ಲಿ ಗುಡಿಸಲು ತೆರವು ಕಾರ್ಯಾಚರಣೆ ವೇಳೆ ಮಗುವೊಂದು ಮೃತಪಟ್ಟಿರುವುದಕ್ಕೆ ರೈಲ್ವೆ ಇಲಾಖೆ ಕಾರಣ ಅಲ್ಲ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಗುಡಿಸಲು ತೆರವು ಕಾರ್ಯಾಚರಣೆಗೂ ಮುನ್ನವೇ ಮಗು ಮೃತಪಟ್ಟಿತ್ತು: ರೈಲ್ವೆ ಸಚಿವ ಸುರೇಶ್ ಪ್ರಭು
Published On :

ನವದೆಹಲಿ: ದೆಹಲಿಯಲ್ಲಿ ಗುಡಿಸಲು ತೆರವು ಕಾರ್ಯಾಚರಣೆ ವೇಳೆ ಮಗುವೊಂದು ಮೃತಪಟ್ಟಿರುವುದಕ್ಕೆ ರೈಲ್ವೆ ಇಲಾಖೆ ಕಾರಣ ಅಲ್ಲ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ದೆಹಲಿಯ ಶಕೂರ್ ಬಸ್ತಿ ಎಂಬಲ್ಲಿ ಸುಮಾರು 1200 ಕೊಳೆಗೇರಿ ಗುಡಿಸಲುಗಳಿದ್ದವು. ಇವುಗಳನ್ನು ರೈಲ್ವೆ ಇಲಾಖೆಗೆ ಸೇರಿದ ಜಾಗವನ್ನು ಒತ್ತುವರಿ  ಮಾಡಿ ನಿರ್ಮಿಸಲಾಗಿದೆ ಎಂಬ ಕಾರಣ  ನೀಡಿ ಇಲಾಖೆ ತೆರವು ಕಾರ್ಯಾಚರಣೆ ನಡೆಸಿತು. ಈ ವೇಳೆ ಆರು ತಿಂಗಳ ಮಗುವೊಂದು ಮೃತಪಟ್ಟಿತ್ತು. ಈ ಘಟನೆ ರೈಲ್ವೆ ಇಲಾಖೆ ಮತ್ತು ದೆಹಲಿ ಸರ್ಕಾರದ ನಡುವೆ ಗುದ್ದಾಟಕ್ಕೆ ಕಾರಣವಾಗಿದ್ದು, ಘಟನೆಗೆ ರೈಲ್ವೆ ಇಲಾಖೆ ಕಾರಣವಲ್ಲ, ಕಾರ್ಯಾಚರಣೆಗೂ ಮುನ್ನವೇ ಮಗು ಮೃತಪಟ್ಟಿತ್ತು ಎಂದು ಸುರೇಶ್ ಪ್ರಭು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.  
ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸುವಂತೆ ಹಲವು ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೂ ಸಹ ಒತ್ತುವರಿ ಮಾಡಿಕೊಂಡವರು ಜಾಗ ಬಿಟ್ಟು ಹೋಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಡೆದ ತೆರವು ಕಾರ್ಯಾಚರಣೆ ಶಾಂತಿಯುತವಾಗಿತ್ತು. ಮಾಧ್ಯಮಗಳು ವರದಿ ಮಾಡಿದಂತೆ ಮಧ್ಯ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಲಾಗಿಲ್ಲ ಎಂದು ಸುರೇಶ್ ಪ್ರಭು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಮಗು ಮೃತಪಟ್ಟಿದ್ದನ್ನು ಖಂಡಿಸಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿ ವಾಲ್‌, ರೈಲ್ವೆ ಇಲಾಖೆ ವಿರುದ್ಧ ಹತ್ಯೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.