26 /11 ಮುಂಬೈ ದಾಳಿಯಲ್ಲಿ ನನ್ನ ಪಾತ್ರ ಸಾಬೀತುಪಡಿಸಲು ಭಾರತಕ್ಕೆ ಸಾಧ್ಯವಿಲ್ಲ: ಉಗ್ರ ಹಫೀಜ್
26 /11 ರ ಮುಂಬೈ ಉಗ್ರರ ದಾಳಿಯಲ್ಲಿ ನನ್ನ ಪಾತ್ರವಿರುವುದನ್ನು ಸಾಬೀತುಪಡಿಸಲು ಭಾರತಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾನೆ.

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನಕ್ಕೆ ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಉಗ್ರ ಹಫೀಜ್ ಸಯೀದ್ ಮುಂಬೈ ದಾಳಿಯ ಬಗ್ಗೆ ಹೇಳಿಕೆ ನೀಡಿದ್ದು, 26 /11 ರ ಮುಂಬೈ ಉಗ್ರರ ದಾಳಿಯಲ್ಲಿ ನನ್ನ ಪಾತ್ರವಿರುವುದನ್ನು ಸಾಬೀತುಪಡಿಸಲು ಭಾರತಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾನೆ.
ಉಗ್ರ ಹಫೀಜ್ ಸಯೀದ್ ನ ಟ್ವಿಟರ್ ಖಾತೆಯಲ್ಲಿ ವಿಡಿಯೋ ಅಪ್ ಡೇಟ್ ಆಗಿದ್ದು, ಮುಂಬೈ ದಾಳಿ ಪ್ರಕರಣದ ಬಗ್ಗೆ ಪಾಕಿಸ್ತಾನ ಸರ್ಕಾರ ಮೌನ ವಹಿಸಿತ್ತು. ಆದರೆ ನಾನು ಸುಷ್ಮಾ ಸ್ವರಾಜ್ ಅವರಿಗೆ ಪ್ರತಿಕ್ರಿಯಿಸುತ್ತಿದ್ದೇನೆ, ದಾಳಿ ನಡೆದು ಏಳು ವರ್ಷಗಳೇ ಕಳೆದಿವೆ, ಈ ವರೆಗೂ ಮುಂಬೈ ದಾಳಿ ರುವಾರಿಯನ್ನು ಕಂಡುಹಿಡಿಯಲು ಭಾರತಕ್ಕೆ ಸಾಧ್ಯವಾಗಿಲ್ಲ. ಅಲ್ಲಾ ಮನಸ್ಸು ಮಾಡಿದರೆ ಮುಂಬೈ ದಾಳಿ ರುವಾರಿಯನ್ನು ಕಂಡುಹಿಡಿಯಲು ಭಾರತಕ್ಕೆ ಕೊನೆಯವರೆಗೂ ಸಾಧ್ಯವಾಗುವುದಿಲ್ಲ ಎಂದು ಉಗ್ರ ಹಫೀಜ್ ಸಯೀದ್ ತಿಳಿಸಿದ್ದಾನೆ.
ಮುಂಬೈ ದಾಳಿ ಕುರಿತು ಸರಿಯಾದ ಸಾಕ್ಷ್ಯ ಒದಗಿಸಲು ಭಾರತ ವಿಫಲವಾಗಿದೆ. ಮುಂಬೈ ದಾಳಿ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವುದಾಗಿ ಇತ್ತೀಚೆಗಷ್ಟೇ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಸುಷ್ಮಾ ಸ್ವರಾಜ್ ಅವರಿಗೆ ಪಾಕ್ ಭರವಸೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


