ಶಾಕೂರ್ ಬಸ್ತಿ ತೆರವು ವಿವಾದ, ರಾಹುಲ್ ಗಾಂಧಿ ಇನ್ನೂ ಚಿಕ್ಕಮಗು: ಕೇಜ್ರಿವಾಲ್
ರಾಹುಲ್ ಗಾಂಧಿ ಇನ್ನೂ ಮಗು ಇದ್ದಂತೆ, ರೈಲ್ವೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತದೆ ಎಂದು ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಗೆ ಹೇಳಿಕೊಟ್ಟಿಲ್ಲ...

ನವದೆಹಲಿ: ದೆಹಲಿಯ ಶಾಕೂರ್ ಬಸ್ತಿ ಕೊಳಗೇರಿ ತೆರವು ವಿವಾದ ಸಂಬಂಧ ದೆಹಲಿಯ ಆಪ್ ಸರ್ಕಾರದ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿ ಇನ್ನೂ ಮಗು ಇದ್ದಂತೆ, ರೈಲ್ವೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ನಿರ್ವಹಿಸುತ್ತದೆ ಎಂದು ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಗೆ ಹೇಳಿಕೊಟ್ಟಿಲ್ಲ ಎಂದು ನನಗೆ ಅನ್ನಿಸುತ್ತಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದೆಹಲಿಯಲ್ಲಿ ಆಪ್ ಸರ್ಕಾರ ಆಡಳಿತದಲ್ಲಿದೆ, ಹೀಗಿದ್ದೂ ಎಎಪಿ ಯಾಕೆ ಪ್ರತಿಭಟನೆ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು.
ರೈಲ್ವೆ ಇಲಾಖೆಯು ಶನಿವಾರ ಶಾಕುರ್ ಬಸ್ತಿ ಕೊಳಗೇರಿ ಪ್ರದೇಶವನ್ನು ತೆರವುಗೊಳಿಸಿದೆ. ಇದರಿಂದ ಇಲ್ಲಿ ವಾಸಿಸುತ್ತಿದ್ದ ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ತೆರವು ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಮೃತಪಟ್ಟ ಹಿನ್ನೆಲೆಯಲ್ಲಿ ವಿವಾದ ಭುಗಿಲೆದ್ದಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ವಾಗ್ವಾದ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


