ಇಬ್ಬರ ಕೈ, ಕಾಲುಗಳನ್ನೇ ಕಡಿದರು!
ಆಡಳಿತಾರೂಢ ಶಿರೋಮಣಿ ಅಕಾಲಿದಳದ ನಾಯಕನೊಬ್ಬನ ತೋಟದ ಮನೆಯಲ್ಲಿ ಶನಿವಾರ ಇಬ್ಬರ ಕೈಕಾಲು...

Published On :
ಅಬೋಹರ್: ಆಡಳಿತಾರೂಢ ಶಿರೋಮಣಿ ಅಕಾಲಿದಳದ ನಾಯಕನೊಬ್ಬನ ತೋಟದ ಮನೆಯಲ್ಲಿ ಶನಿವಾರ ಇಬ್ಬರ ಕೈಕಾಲುಗಳನ್ನು ಕಡಿದ ಘಟನೆ ಪಂಜಾಬ್‍ನ ಫಾಜಿಲ್ಕಾ ಜಿಲ್ಲೆಯ ಅಬೋಹರ್ ಎಂಬಲ್ಲಿ ನಡೆದಿದೆ.
ಎರಡೂ ಕೈಗಳು ಮತ್ತು ಎರಡೂ ಕಾಲುಗಳನ್ನು ಕಳೆದುಕೊಂಡ ಭೀಮ್ ಟಾಂಕ್ ಎಂಬವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಮೃತಪಟ್ಟರೆ, ಒಂದು ಕೈಯ್ಯನ್ನು ಕಳೆದುಕೊಂಡ ಗುರ್ಜಂತ್ ಸಿಂಗ್ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ಸಂಬಂಧ ಅಕಾಲಿದಳ ನಾಯಕ ಶಿವಲಾಲ್ ದೋಡಾ ಸೇರಿದಂತೆ 11 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಭಾನುವಾರ ಭಾರಿ ಪ್ರತಿಭಟನೆ ನಡೆಸಿದ್ದು, ಜಿಲ್ಲೆಯಾದ್ಯಂತ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಿ ಸ್ವಯಂಪ್ರೇರಿತ ಬಂದ್ ಆಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


