ದೇಶ

ಜಿಎಸ್ ಟಿ ಮಸೂದೆಯನ್ನು ವಿರೋಧಿಸಬೇಡಿ: ಕಾಂಗ್ರೆಸ್ ಗೆ ಜೇಟ್ಲಿ ಒತ್ತಾಯ

ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಜಿಎಸ್ ಟಿ ಮಸೂದೆಗೆ ಬೆಂಬಲ ನೀಡುವಂತೆ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆ ಮನವಿ ಮಾಡಿದ್ದಾರೆ.

ಜಿಎಸ್ ಟಿ ಮಸೂದೆಯನ್ನು ವಿರೋಧಿಸಬೇಡಿ: ಕಾಂಗ್ರೆಸ್ ಗೆ ಜೇಟ್ಲಿ ಒತ್ತಾಯ
ಅರುಣ್ ಜೇಟ್ಲಿ
Published On :

ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಜಿಎಸ್ ಟಿ ಮಸೂದೆಗೆ ಬೆಂಬಲ ನೀಡುವಂತೆ ವಿತ್ತ ಸಚಿವ ಅರುಣ್ ಜೇಟ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆ ಮನವಿ ಮಾಡಿದ್ದಾರೆ.
ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಈ ಹಿಂದೆ ತಾನೇ ಮಸೂದೆಯಲ್ಲಿ ಪ್ರಸ್ತಾಪಿಸಿದ್ದ ಕೆಲವು ಅಂಶಗಳನ್ನು ವಿರೋಧಿಸುತ್ತಿದೆ. ಜಿಎಸ್ ಟಿ ಮಸೂದೆ ಎಲ್ಲಾ ಪಕ್ಷಗಳ ಸಾಮೂಹಿಕ ಜಾಣ್ಮೆಯ ಪ್ರತಿಫಲ. ಆದರೆ ಬಡವರ ಪರವಾಗಿದ್ದೇವೆ ಎಂದು ತೋರಿಸಿಕೊಳ್ಳಲು ಮಸೂದೆಯನ್ನು ವಿರೋಧಿಸುತ್ತಿರುವವರು ವಾಸ್ತವವಾಗಿ ಬಡತನವನ್ನು ಶಾಶ್ವತವಾಗಿರಿಸುವುದಕ್ಕೆ ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಸಂಸತ್ ನಲ್ಲಿ ಮಸೂದೆ ಜಾರಿಗೆ ಕಾಂಗ್ರೆಸ್ ಅಡ್ಡಿಪಡಿಸುತ್ತಿರುವ ಬಗ್ಗೆ ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸಭೆ ನಡೆಸಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಜಿಎಸ್ ಟಿ ಮಸೂದೆ ಅಂಗೀಕಾರಕ್ಕೆ ಅಡ್ಡಿ ಪಡಿಸುವುದು ಮುಂದುವರೆದರೆ, ಕಾಂಗ್ರೆಸ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.