ದೇಶ

ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ಪದ ಬಳಕೆ ಅಸಹ್ಯಕರ: ಬಿಜೆಪಿ

ಸಿಬಿಐ ಅಧಿಕಾರಿಗಳು ತಮ್ಮ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ...

ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ಪದ ಬಳಕೆ ಅಸಹ್ಯಕರ: ಬಿಜೆಪಿ
ವೆಂಕಯ್ಯ ನಾಯ್ಡು
Published On :
ನವದೆಹಲಿ: ಸಿಬಿಐ ಅಧಿಕಾರಿಗಳು ತಮ್ಮ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪದ ಬಳಕೆ ಮಾಡಿರುವುದು ಅಸಹ್ಯಕರ ಎಂದು ಬಿಜೆಪಿ ಮುಖಂಡ ವಿಜೇಂದರ್ ಗುಪ್ತಾ ಹೇಳಿದ್ದಾರೆ.
ದೆಹಲಿಯಲ್ಲಿ ಏನೇ ನಡೆದರೂ ಅದಕ್ಕೆ ಕೇಂದ್ರ ಸರ್ಕಾರವನ್ನು ದೂಷಿಸುವುದು ಕೇಜ್ರಿವಾಲ್ ಅವರಿಗೆ ಫ್ಯಾಷನ್ ಆಗಿಬಿಟ್ಟಿದೆ. ಸಿಬಿಐ ಪ್ರಧಾನಿ  ಹಾಗೂ ಕೇಂದ್ರ ಸರ್ಕಾರ ಕೈಗೊಂಬೆಯಾಗಿಲ್ಲ. ಆಯಾ ಸಂಸ್ಥೆಗಳಿಗೆ ತಮ್ಮದೆ ಆದ ಅಧಿಕಾರವನ್ನು ನೀಡಿರುತ್ತೇವೆ. ಹೀಗಾಗಿ ಸಿಬಿಐ ಕಾರ್ಯಾಚರಣೆಯ ವಿವರಗಳನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಸಿಬಿಐ ದಾಳಿ ಕುರಿತಂತೆ ಕೇಜ್ರಿವಾಲ್, ರಾಜಕೀಯವಾಗಿ ನನ್ನನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸಿಬಿಐ ದಾಳಿ ಮೂಲಕ ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ. ಮೋದಿ ಓರ್ವ ಸೈಕೋಪಾತ್ ಎಂದು ಟ್ವೀಟಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.