ದೆಹಲಿ ಮೇಲೆ ದಾಳಿಗೆ ಸಂಚು: 2 ಜಿಹಾದಿಗಳ ಬಂಧನ
ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎಂಬ ಆರೋಪದ ಮೇರೆಗೆ ಇಬ್ಬರು ಶಂಕಿತ ಬಿಹಾದಿಗಳನ್ನು ಬುಧವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ...

ನವದೆಹಲಿ: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ರಾಜಧಾನಿ ದೆಹಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎಂಬ ಆರೋಪದ ಮೇರೆಗೆ ಇಬ್ಬರು ಶಂಕಿತ ಬಿಹಾದಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಬುಧವಾರ ಎಂದು ತಿಳಿದುಬಂದಿದೆ.
ಬಂಧಿತರನ್ನು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೂಲದವರಾಗಿದ್ದಾರೆಂದು ಹೇಳಲಾಗುತ್ತಿದ್ದು, ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಇವರನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ವ್ಯಕ್ತಿಗಳು ಜಿಹಾದಿ ಸಂಘಟನೆಯ ಕಾರ್ಯಕರ್ತರಾಗಿದ್ದಾರೆಂದು ಶಂಕಿಸಲಾಗಿದೆ. ಆದರೆ, ಬಂಧಿತ ವ್ಯಕ್ತಿಗಳ ಹೆಸರು ಹಾಗೂ ಇನ್ನಿತರೆ ಮಾಹಿತಿಗಳನ್ನು ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.
ಉಗ್ರರ ಬೆದರಿಕೆ ಹಿನ್ನೆಲೆಯಲ್ಲಿ ಹಾಗೂ ಕೆಲವು ಉಗ್ರ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಉತ್ತರ ಪ್ರದೇಶದ ಹಲವೆಡೆ ಬೀಡುಬಿಟ್ಟಿದ್ದಾರೆಂಬ ಮಾಹಿತಿ ಮೇರೆಗೆ ವಿಶೇಷ ದಳದ ಅಧಿಕಾರಿಗಳು ಉತ್ತರಪ್ರದೇಶದಾದ್ಯಂತ ಕಾರ್ಯಾಚರಣೆಗಿಳಿದಿದ್ದರು. ಕಾರ್ಯಾಚರಣೆ ವೇಳೆಯಲ್ಲಿ ಇಬ್ಬರು ಶಂಕಿತ ಜಿಹಾದಿ ಸಂಘಟನೆಯ ಯುವಕರನ್ನು ಅಧಿಕಾರಿಗಳು ಇದೀಗ ಬಂಧನಕ್ಕೊಳಪಡಿಸಿದ್ದಾರೆ.
ಇದೀಗ ಬಂಧನಕ್ಕೊಳಕಾಗಿರುವ ಶಂಕಿತರು ಎರಡು ವರ್ಷಗಳ ಹಿಂದಷ್ಟೇ ಕಾಣೆಯಾಗಿದ್ದು, ಗಡಿ ದಾಟಿ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದ ತರಭೇತಿ ಕೇಂದ್ರಗಳಿಗೆ ಸೇರಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಎರಡು ವರ್ಷಗಳ ಹಿಂದೆ ಕಾಣೆಯಾದ ವ್ಯಕ್ತಿಗಳು ಅಧಿಕಾರಿಗಳ ಕಣ್ಣಿಗೆ ಬಿದ್ದಿದ್ದು, ಹೊಸ ವರ್ಷಾಚರಣೆ ಹಾಗೂ ಕ್ರಿಸ್ ಮಸ್ ಹಬ್ಬದಂದು ದೆಹಲಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


