ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್: ಜಾಮೀನು ಕೋರದಿರಲು ಸೋನಿಯಾ, ರಾಹುಲ್ ನಿರ್ಧಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 19ರಂದು ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ನ್ಯಾಷನಲ್ ಹೆರಾಲ್ಡ್ ಕೇಸ್: ಜಾಮೀನು ಕೋರದಿರಲು ಸೋನಿಯಾ, ರಾಹುಲ್ ನಿರ್ಧಾರ
ರಾಹುಲ್ ಗಾಂಧಿ - ಸೋನಿಯಾ ಗಾಂಧಿ
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 19ರಂದು ನ್ಯಾಯಾಲಯಕ್ಕೆ ಹಾಜರಾಗುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸದಿರಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಕರಣ ಸಂಬಂಧ ಶನಿವಾರ ಕೋರ್ಟ್‌ಗೆ ಹಾಜರಾಗುತ್ತಿರುವ ಸೋನಿಯಾ ಹಾಗೂ ರಾಹುಲ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಬದಲು, ತಾವು ನಿರಪರಾಧಿಗಳು ಎಂದು ಸಾಬೀತುಪಡಿಸಲು ಜೈಲಿಗೆ ಹೋಗಲು ಸಿದ್ಧ ಎಂಬ ನಿಲುವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಪಟಿಯಾಲಾ ಹೌಸ್‌ಕೋರ್ಟ್‌ನಲ್ಲಿ ಶನಿವಾರ ಶಕ್ತಿ ಪ್ರದರ್ಶನ ಮಾಡಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದ್ದು, ಈ ವೇಳೆ ಭಾರಿ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಸೋನಿಯಾ ಹಾಗೂ ರಾಹುಲ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸದಿದ್ದರೆ, ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.