ದೇಶ

ರೈಲು, ರೈಲು ನಿಲ್ದಾಣದಲ್ಲಿ 54 ಅತ್ಯಾಚಾರ ಪ್ರಕರಣ

ರೈಲ್ವೆ ಬೋಗಿಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಕಳೆದ ಒಂದು ವರ್ಷದಲ್ಲಿ 54 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 51 ಆರೋಪಿಗಳನ್ನು ಬಂಧಿಸಲಾಗಿದೆ.

ರೈಲು, ರೈಲು ನಿಲ್ದಾಣದಲ್ಲಿ 54 ಅತ್ಯಾಚಾರ ಪ್ರಕರಣ
ಅತ್ಯಾಚಾರ(ಸಾಂಕೇತಿಕ ಚಿತ್ರ)
Published On :

ನವದೆಹಲಿ: ರೈಲು ಬೋಗಿಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಕಳೆದ ಒಂದು ವರ್ಷದಲ್ಲಿ  54 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಈ ಪೈಕಿ 51 ಆರೋಪಿಗಳನ್ನು ಬಂಧಿಸಲಾಗಿದೆ.
2014 ರಲ್ಲಿ 20 ಅತ್ಯಾಚಾರ ಪ್ರಕರಣಗಳು ರೈಲು ಬೋಗಿಗಳಲ್ಲಿ ನಡೆದಿದ್ದರೆ, 14 ಪ್ರಕರಣಗಳು ರೈಲ್ವೆ ನಿಲ್ದಾಣದಲ್ಲಿ ನಡೆದಿವೆ. ಈ ವರ್ಷದ ನವೆಂಬರ್ ವರೆಗೆ 34 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಒಂದು ವರ್ಷದಲ್ಲಿ ಒಟ್ಟು 54 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ಮನೋಜ್ ಸಿನ್ಹಾ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ 21 ಆರೋಪಿಗಳನ್ನು ಕಳೆದ ವರ್ಷವೇ ಬಂಧಿಸಲಾಗಿದ್ದು 2015 ರ ನವೆಂಬರ್ ವರೆಗೂ 30 ಜನರನ್ನು ಬಂಧಿಸಲಾಗಿದೆ ಎಂದು ಸಿನ್ಹಾ ಮಾಹಿತಿ ನೀಡಿದ್ದಾರೆ. ಮಹಿಳೆಯರ ರಕ್ಷಣೆಗಾಗಿ ರೈಲ್ವೆ ಇಲಾಖೆ ರೈಲ್ವೆ ರಕ್ಷಣಾ ಪಡೆಯನ್ನು ನಿಯೋಜನೆ ಮಾಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.