ಅರುಣಾಚಲ ಪ್ರದೇಶ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ಅರುಣಾಚಲ ಪ್ರದೇಶ ರಾಜ್ಯಪಾಲರು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕೇಂದ್ರ ಸರ್ಕಾರ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ನವದೆಹಲಿ: ಅರುಣಾಚಲ ಪ್ರದೇಶ ರಾಜ್ಯಪಾಲರು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಕೇಂದ್ರ ಸರ್ಕಾರ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ರಾಜ್ಯಪಾಲರು ಅಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಗುವಾಹಟಿ ಹೈಕೋರ್ಟ್ ಸಹ ಒಪ್ಪಿದ್ದು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಸ್ ಕಲಿಸಬೇಕು ಎಂದು ಗುಲಾಂ ನಭಿ ಆಜಾದ್ ಆಗ್ರಹಿಸಿದ್ದಾರೆ.
‘ರಾಜ್ಯಪಾಲರು, ಸಚಿವ ಸಂಪುಟ ಮತ್ತು ಮುಖ್ಯಮಂತ್ರಿಯ ಒಪ್ಪಿಗೆ- ಶಿಫಾರಸು ಇಲ್ಲದೆಯೇ ವಿಧಾನ ಮಂಡಲದ ಅಧಿವೇಶನ ಕರೆದು, ಕಾರ್ಯಸೂಚಿ ನಿಗದಿ ಪಡಿಸಿದ್ದಾರೆ. ಆಸನ ವ್ಯವಸ್ಥೆ ಮಾಡಿಸಿದ್ದಾರೆ ಮತ್ತು ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಆದ್ಯತೆ ನಿರ್ಧರಿಸಿದ್ದಾರೆ. ಇದು ಅಸಾಂವಿಧಾನಿಕ ಎಂದು ಕಾಂಗ್ರೆಸ್ ಆರೋಪಿಸಿದೆ.
ಅರುಣಾಚಲ ಪ್ರದೇಶದ 34 ಶಾಸಕರು ಮುಖ್ಯಮಂತ್ರಿ ನಬಂ ತುಕಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ, ಕಲಿಖೋ ಪುಲ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದರು. ಇದಕ್ಕೂ ಮುನ್ನ ಸಭಾಧ್ಯಕ್ಷರನ್ನು ಪದಚ್ಯುತಗೊಳಿಸಲಾಗಿತ್ತು. ಸಭಾಧ್ಯಕ್ಷರನ್ನು ಪದಚ್ಯುತಗೊಳಿಸಿದ ಕ್ರಮ ಮತ್ತು ಗುರುವಾರ ಹೊಟೇಲ್ ಒಂದರಲ್ಲಿ ಸಭೆ ಸೇರಿ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕರಿಸಿ ಹೊಸ ಮುಖ್ಯಮಂತ್ರಿಯನ್ನು ನೇಮಿಸಿದ ಕ್ರಮಕ್ಕೆ ಗುವಾಹಾಟಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಂವಿಧಾನದ ಸಂಪ್ರದಾಯ ಮುರಿದಿದ್ದ ರಾಜ್ಯಪಾಲ ಜೆ.ಪಿ. ರಾಜಖೋವಾ ಅವರು ವಿಧಾನಸಭಾ ಸ್ಪೀಕರ್ ಬದಲು, ತಾವೇ ವಿಧಾನಸಭೆ ಅಧಿವೇಶನ ಕರೆದು ಡಿ. 9ರಂದು ಅಧಿಸೂಚನೆ ಪ್ರಕಟಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಕ್ರಮವನ್ನು ಸ್ಪೀಕರ್ ನಬಂ ರೆಬಿಯಾ ರಿಟ್ ಅರ್ಜಿ ಮೂಲಕ ಗುವಾಹಾಟಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


