ದೇಶ

ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಹೆದರುತ್ತಿರುವುದೇಕೆ?; ಸುಬ್ರಮಣ್ಯನ್ ಸ್ವಾಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು...

ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಹೆದರುತ್ತಿರುವುದೇಕೆ?; ಸುಬ್ರಮಣ್ಯನ್ ಸ್ವಾಮಿ
ಸುಬ್ರಮಣ್ಯನ್ ಸ್ವಾಮಿ
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೆದರುತ್ತಿರುವುದು ಏಕೆ? ಎಂದು ಬಿಜೆಪಿ ನಾಯಕ ಹಾಗೂ ದೂರುದಾರ ಸುಬ್ರಮಣ್ಯನ್ ಸ್ವಾಮಿ ಅವರು ಶನಿವಾರ ಪ್ರಶ್ನಿಸಿದ್ದಾರೆ.

ಸೋನಿಯಾ, ರಾಹುಲ್ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗುವ ಮುನ್ನ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸ್ವಾಮಿ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ ಸ್ವಾಮಿ, ನಾನು ಗಾಂಧಿ ಕುಟುಂಬದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದೇನೆ. ರಾಜಕೀಯ ಹೋರಾಟ ಅಲ್ಲ ಎಂದರು.

ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದು, ಕಾಂಗ್ರೆಸ್ ನಾಯಕರು ಬೀದಿಯಲ್ಲಿ ಹೋರಾಟ ಮಾಡುವ ಬದಲು ಕಾನೂನು ಹೋರಾಟ ಎದುರಿಸಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.