ದೆಹಲಿ ಸಂಚಾರ ವ್ಯವಸ್ಥೆ ಪರಿಷ್ಕರಣೆ: ಜನವರಿ 1 ರಿಂದ 15ರ ವರೆಗೆ ಶಾಲೆಗಳಿಗೆ ರಜೆ
ದೆಹಲಿ ಸರ್ಕಾರದ ಹೊಸ ವಾಹನ ಸಂಚಾರ ವ್ಯವಸ್ಥೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಹೊಸವರ್ಷಾರಂಭದಲ್ಲಿ ದೆಹಲಿ ಶಾಲೆಗಳಿಗೆ 15 ದಿನ ರಜೆ ..

Published On :
ನವದೆಹಲಿ: ದೆಹಲಿ ಸರ್ಕಾರದ ಹೊಸ ವಾಹನ ಸಂಚಾರ ವ್ಯವಸ್ಥೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಹೊಸವರ್ಷಾರಂಭದಲ್ಲಿ ದೆಹಲಿ ಶಾಲೆಗಳಿಗೆ 15 ದಿನ ರಜೆ ಘೋಷಿಸಲಾಗಿದೆ.
ಶಾಲಾ ಶಿಕ್ಷಣ ನಿರ್ದೇಶಕರು ಮತ್ತು ಶಾಲಾ ಅಧಿಕೃತರೊಂದಿಗೆ ಈ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆದಿತ್ತು ಎನ್ನಲಾಗುತ್ತಿದೆ.
ವಾಹನ ಸಂಚಾರ ವ್ಯವಸ್ಥೆ ಪರಿಷ್ಕರಣೆ ಜಾರಿಗೆ ಬರುವ ದಿನಗಳಾದ ಜನವರಿ 1 ರಿಂದ 15 ರವರೆಗೆ ಇಲ್ಲಿನ ಶಾಲೆಗಳಿಗೆ ರಜೆ ನೀಡಲಾಗಿದೆ . ಸಮ ಮತ್ತು ಬೆಸ ಸಂಖ್ಯೆಯ ವಾಹನಗಳು ಒಂದೊಂದು ದಿನ ಸಂಚರಿಸಬೇಕು ಎಂಬ ನಿಯಮ ಜಾರಿಗೆ ಬಂದಾಗ ಕೆಲವೊಂದು ಬಸ್ ಸಂಚಾರ ಸ್ಥಗಿತಗೊಳಿಸಬೇಕಾಗುತ್ತದೆ. ಇದೀಗ ದೆಹಲಿ ಟ್ರಾನ್ಸ್‌ಪೋರ್ಟ್ ಕಾರ್ಪರೇಷನ್‌ನ 2000 ಬಸ್‌ಗಳನ್ನು ಶಾಲಾ ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ಬಳಸಲಾಗುತ್ತಿದೆ. ಇದು ಸಂಚಾರ ವ್ಯವಸ್ಥೆ ಪರಿಷ್ಕರಣೆಗೊಳಪಟ್ಟಾಗ ಬಸ್‌ಗಳ ಸಂಖ್ಯೆಯೂ ಕಡಿಮೆಯಾಗಲಿದೆ. ಮಾತ್ರವಲ್ಲದೆ ಹೊಸ ಬಸ್‌ಗಳಲ್ಲಿ ಅರ್ಧದಷ್ಟು ಸೀಟುಗಳನ್ನು ಮಹಿಳೆಯರಿಗೆ ಮೀಸಲು ನೀಡಲು ಸರ್ಕಾರ ಚಿಂತನೆ ನಡೆಸಿದೆ.
ಈಗಾಗಲೇ ಶಿಕ್ಷಣ ನಿರ್ದೇಶನಾಲಯ ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಜೆಯ ಬಗ್ಗೆ ಸುತ್ತೋಲೆ ಕಳುಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


