ಭಾರತದಲ್ಲಿ ಗುರ್ತಿಸಿಕೊಳ್ಳಲು ಇಸಿಸ್ ಉಗ್ರ ಸಂಘಟನೆ ಯತ್ನ ನಡೆಸುತ್ತಿದೆ: ರಾಜನಾಥ ಸಿಂಗ್
ಭಾರತದಲ್ಲಿ ತನ್ನು ಗುರ್ತಿಕೆಯನ್ನು ಹೆಚ್ಚಿಸಿಕೊಳ್ಳಲು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ಭಾರತದಲ್ಲಿ ತನ್ನು ಗುರ್ತಿಕೆಯನ್ನು ಹೆಚ್ಚಿಸಿಕೊಳ್ಳಲು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯಾ (ಇಸಿಸ್) ಉಗ್ರ ಸಂಘಟನೆ ಪ್ರಯತ್ನ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶನಿವಾರ ಹೇಳಿದ್ದಾರೆ.
ಗುಜರಾತ್ ನಲ್ಲಿ ನಡೆಯುತ್ತಿರುವ ಪೊಲೀಸ್ ನಿರ್ದೇಶಕರ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿರುವ ಅವರು, ಈಗಾಗಲೇ ಭಾರತದ ನೆರೆರಾಷ್ಟ್ರವಾಗಿರುವ ಬಾಂಗ್ಲಾದೇಶ ಹಾಗೂ ಅಘ್ಘಾನಿಸ್ತಾನದಲ್ಲಿ ಗುರ್ತಿಸಿಕೊಂಡಿರುವ ಇಸಿಸ್ ಉಗ್ರ ಸಂಘಟನೆ ಇದೀಗ ಭಾರತದಲ್ಲಿ ತನ್ನ ಗುರ್ತಿಕೆ ಹೆಚ್ಚಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದ್ದು, ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಹೇಳಿದ್ದಾರೆ.
ಉಗ್ರ ಸಂಘಟನೆಗಳ ಬೆದರಿಕೆ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಹಕಾರದಿಂದ ಇರಬೇಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಕಷ್ಟು ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತೆಯ ವಿಷಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮವಾಗಿದೆ. ಭದ್ರತಾ ಪಡೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಭಯೋತ್ಪಾದನಾ ಚಟುವಟಿಕೆಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೈಯಕ್ತಿಕವಾಗಿ ತೆಗೆದುಕೊಂಡ ಕಾರಣ ದೇಶದ ದೊಡ್ಡ ಸಮಸ್ಯೆಯಾಗಿದ್ದ ನಾಗಾ ಸಮಸ್ಯೆ ಪರಿಹಾರಗೊಂಡಿತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


