ಮೋದಿ ಸರ್ಕಾರಕ್ಕೆ ವಿಪಕ್ಷ ಮುಕ್ತ ಭಾರತ ಬೇಕಿದೆ: ಕಾಂಗ್ರೆಸ್
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ವಿಪಕ್ಷ ಮುಕ್ತ ಭಾರತ ಬೇಕಿದೆ ಎಂದು ಕಾಂಗ್ರೆಸ್ ಪಕ್ಷ ಶನಿವಾರ ಹೇಳಿದೆ...

ನವದೆಹಲಿ: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ವಿಪಕ್ಷ ಮುಕ್ತ ಭಾರತ ಬೇಕಿದೆ ಎಂದು ಕಾಂಗ್ರೆಸ್ ಪಕ್ಷ ಶನಿವಾರ ಹೇಳಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಪ್ರಕರಣದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಇಂದು ಕೋರ್ಟ್ ಗೆ ಹಾಜರಾಗಲಿದ್ದು, ಸೋನಿಯಾ, ರಾಹುಲ್ ಇಬ್ಬರಿಗೂ ನಿರ್ಣಾಯಕ ದಿನವಾಗಿದೆ. ಪ್ರಕರಣ ಸಂಬಂಧ ರಾಜಕೀಯ ನಾಯಕರ ನಡುವೆ ಹಗ್ಗಜಗ್ಗಾಟ ಮುಂದುವರೆದಿದ್ದು, ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ.
ಇದೀಗ ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಹೇಳಿಕೆ ವಿರೋಧಿಸಿ ಹಲವೆಡೆ ಪ್ರತಿಭಟನೆಗಿಳಿದಿದೆ.
ನವದೆಹಲಿ, ಮುಂಬೈ, ಜೈಪುರ, ಲಖನೈ, ಕಾನ್ಪುರ, ವಾರಣಾಸಿ, ಪಾಟ್ನ, ನಾಗ್ಪುರ ಹಾಗೂ ಕೊಯಿಮತ್ತೂರು ಸೇರಿದಂತೆ ಹಲವೆಡೆ ಪ್ರತಿಭಟನೆಗಿಳಿದಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ಘೋಷಣೆಗಳನ್ನು ಕೂಗುತ್ತಿದೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ಮಾತನಾಡಿದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಪಕ್ಷ ಕಾಂಗ್ರೆಸ್'ನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುತ್ತಲೇ ಬಂದಿದೆ. ಬಿಜೆಪಿಗೆ ವಿಪಕ್ಷ ಮುಕ್ತ ಭಾರತಬೇಕಿದೆ. ಹೀಗಾಗಿಯೇ ಕಾಂಗ್ರೆಸ್ ಮುಕ್ತ ಭಾರತ ಎಂಬ ಘೋಷಣೆಗಳನ್ನು ಕೂಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಮಾತನಾಡಿರುವ ಅವರು, ನಮಗೆ ಕಾನೂನು ಮತ್ತು ಸಂವಿಧಾನದ ಮೇಲೆ ನಂಬಿಕೆಯಿದೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಗೌರವ್ ಗಗೋಯ್ ಮಾತನಾಡಿ, ನಮ್ಮ ಪ್ರತಿಭಟನೆ ಬಿಜೆಪಿಯ ಷಡ್ಯಂತ್ರದ ವಿರುದ್ದವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರದ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಕಾಂಗ್ರೆಸ್ ಮೇಲೆ ದಾಳಿ ಮಾಡುತ್ತಿದೆ. ಇದೀಗ್ ಕಾಂಗ್ರೆಸ್ ನಾಯಕರು ಒಂದೆಡೆ ಸೇರಿದ್ದು, ನಮ್ಮಲ್ಲಿರುವ ಒಗ್ಗಟ್ಟನ್ನು ತೋರಿಸುತ್ತೇವೆ ಎಂದು ಹೇಳಿದ್ದಾರೆ.
ಇದೇ ರೀತಿ ಭೋಪಾಲ್ ನಲ್ಲೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರಗೊಂಡ ಕಾರಣ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸೆಕ್ಷನ್ 151ರ ಅಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧನಕ್ಕೊಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


