ದೇಶ

ತೆಲುಗು ಹಿರಿಯ ನಟ ಕಾಗ ರಂಗನಾಥ್ ಆತ್ಮಹತ್ಯೆ

ತೆಲುಗಿನ ಹಿರಿಯ ನಟ ಕಾಗ ರಂಗನಾಥ್(66) ಅವರು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತೆಲುಗು ಹಿರಿಯ ನಟ ಕಾಗ ರಂಗನಾಥ್ ಆತ್ಮಹತ್ಯೆ
ರಂಗನಾಥ್
Published On :

ಹೈದರಾಬಾದ್: ತೆಲುಗಿನ ಹಿರಿಯ ನಟ ಕಾಗ ರಂಗನಾಥ್(66) ಅವರು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಂದು ಹೈದರಾಬಾದ್‌ನ ಕವಾಡಿಗೂಡದ ತಮ್ಮ ನಿವಾಸದಲ್ಲಿ ರಂಗನಾಥ್ ಅವರು ತಮ್ಮ ಆತ್ಮೀಯ ಸ್ನೇಹಿತನಿಗೆ "ಗುಡ್ ಬೈ' ಎಂದು ಎಸ್ ಎಂಎಸ್ ಮಾಡಿ, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ನಟನ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

1973ರಲ್ಲಿ 'ಚಂದನಾ' ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ರಂಗನಾಥ್ ಅವರು, ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಈ ಮಧ್ಯೆ, ಹಿರಿಯ ನಟ ಕಾಗರಂಗನಾಥ್ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ಕುಟುಂಬ ವರ್ಗ, ಈ ಸಂಬಂಧ ಮುಷಿರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.