ಹಳಿ ತಪ್ಪಿದ ಅಮ್ರಪಾಲಿ ಎಕ್ಸ್ ಪ್ರೆಸ್; ಪ್ರಯಾಣಿಕರು ಸುರಕ್ಷಿತ
ಅಮೃತಸರಕ್ಕೆ ಸಾಗುತ್ತಿದ್ದ ಅಮ್ರಪಾಲಿ ಎಕ್ಸ್ಪ್ರೆಸ್ ರೈಲು ಬಿಹಾರದಲ್ಲಿ ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ...

ಪಾಟ್ನಾ: ಅಮೃತಸರಕ್ಕೆ ಸಾಗುತ್ತಿದ್ದ ಅಮ್ರಪಾಲಿ ಎಕ್ಸ್ಪ್ರೆಸ್ ರೈಲು ಬಿಹಾರದಲ್ಲಿ ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಕತಿಹಾರ್ನಿಂದ ಅಮೃತಸರಕ್ಕೆ ಸಾಗುತ್ತಿದ್ದ ರೈಲು ಸಂಖ್ಯೆ 15707 ಅಮ್ರಪಾಲಿ ಎಕ್ಸ್ಪ್ರೆಸ್ ರೈಲಿನ ಒಟ್ಟು ಏಳು ಬೋಗಿಗಳು ಹಳಿ ತಪ್ಪಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕತಿಹಾರ್ ಎಕ್ಸ್ ಪ್ರೆಸ್ ರೈಲು ಬಿಹಾರದ ಖಗಾರಿಯಾ ಬಳಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ವಕ್ತಾರ ಅನಿಲ್ ಸಕ್ಸೇನಾ ತಿಳಿಸಿದ್ದಾರೆ.
ಮುಂಜಾನೆ ಎಲ್ಲರೂ ನಿದ್ದೆಗೆ ಜಾರಿದ್ಧ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಳಿ ತಪ್ಪಿದ ಬೋಗಿಗಳ ಪೈಕಿ ಐದು ಸ್ಲೀಪರ್ ಕೋಚ್, ಎರಡು ಎಸಿ ಕೋಚ್ಗಳಾಗಿವೆ ಎಂದು ತಿಳಿದು ಬಂದಿದೆ. ಬೆಳಗ್ಗೆ ಕೆಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿತ್ತು. ಎಲ್ಲಾ ಬೋಗಿಗಳನ್ನು ಹಳಿಯಿಂದ ತೆರವುಗೊಳಿಸಿ ಉಳಿದ ರೈಲುಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಕ್ಸೇನಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


