ಐಐಟಿಯನ್ ಗಳಿಗೆ ನಿಜವಾದ ದೇಶಭಕ್ತಿ ಇರುವುದಿಲ್ಲ: ಮಾರ್ಕಾಂಡೇಯ ಕಾಟ್ಜು
ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮಾರ್ಕಾಂಡೇಯ ಕಾಟ್ಜು ಐಐಟಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ್ದು ಐಐಟಿಯನ್ ಗಳಿಗೆ ಭಾರತದ ಬಗ್ಗೆ ನಿಜವಾದ ಅಭಿಮಾನ ಇಲ್ಲ ಎಂದು ಹೇಳಿದ್ದಾರೆ.

ಮುಂಬೈ: ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮಾರ್ಕಾಂಡೇಯ ಕಾಟ್ಜು ಐಐಟಿ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ್ದು ಐಐಟಿಯನ್ ಗಳಿಗೆ ಭಾರತದ ಬಗ್ಗೆ ನಿಜವಾದ ಅಭಿಮಾನ ಇಲ್ಲ ಎಂದು ಹೇಳಿದ್ದಾರೆ.
ಬಾಂಬೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಮಾರ್ಕಾಂಡೇಯ ಕಾಟ್ಜು ಐಐಟಿಯನ್ ಗಳಲ್ಲಿ ದೇಶಭಕ್ತಿ ಉಳಿದಿಲ್ಲ. ಐಐಟಿಯನ್ ಗಳು ಸ್ವಾರ್ಥಿಗಳಾಗಿದ್ದು ಅವರಲ್ಲಿ ದೇಶಭಕ್ತಿ ಉಳಿದಿಲ್ಲ ಎಂದು ಹೇಳಿದ್ದಾರೆ.
ಬಾಂಬೆ ಐಐಟಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು ಮಾರ್ಕಾಂಡೇಯ ಕಾಟ್ಜು ಅವರನ್ನು ಆಹ್ವಾನಿಸಲಾಗಿತ್ತು, ಆದರೆ ಕಾಟ್ಜು ಅವರು ಐಐಟಿ ವಿದ್ಯಾರ್ಥಿಗಳ ಬಗ್ಗೆ ಅನಿರೀಕ್ಷಿತ ಹೇಳಿಕೆ ನೀಡಿದ್ದಾರೆ. ವಿದ್ಯಾಭ್ಯಾಸದ ನಂತರ ಐಐಟಿಯನ್ ಗಳು ಹೊರದೇಶಗಳಿಗೆ ಹೋಗಿ ನೆಲೆಸಿ ಎನ್ ಆರ್ ಐ ಗಳಾಗುತ್ತಾರೆ. ಆದರೆ ದೇಶದ ಜನತೆಗೆ ಯಾವುದು ಒಳ್ಳೆಯದು ಯಾವುದು ಒಳ್ಳೆಯದಲ್ಲ ಎಂಬುದನ್ನು ಅರಿಯಲು ವಿಫಲರಾಗುತ್ತಾರೆ ಎಂದು ಮಾರ್ಕಾಂಡೇಯ ಕಾಟ್ಜು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


