ದೇಶ

ಡಿಸೆಂಬರ್ 22 ರಿಂದ 2 ದಿನಗಳ ಕಾಲ ರಾಷ್ಟ್ರಪತಿ ಕರ್ನಾಟಕ ಪ್ರವಾಸ

ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಡಿಸೆಂಬರ್ 22ರಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ....

ಡಿಸೆಂಬರ್ 22 ರಿಂದ 2 ದಿನಗಳ ಕಾಲ ರಾಷ್ಟ್ರಪತಿ ಕರ್ನಾಟಕ ಪ್ರವಾಸ
ಪ್ರಣಬ್ ಮುಖರ್ಜಿ
Published On :
ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಡಿಸೆಂಬರ್ 22ರಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸದಲ್ಲಿರಲಿದ್ದಾರೆ.
ರಾಷ್ಟ್ರಪತಿಯವರು ಡಿಸೆಂಬರ್ 22ರಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅದೇ ದಿನ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಪಾರಂಪರಿಕ ಕಟ್ಟಡವೊಂದನ್ನು ಲೋಕಾರ್ಪಣೆಗೊಳಿಸುವರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸದ್ಯ ಸಿಕಂದರಾಬಾದ್‌ನ ಪ್ರವಾಸಿ ಬಿಡಾರದಲ್ಲಿ ತಂಗಿರುವ ಮುಖರ್ಜಿ, ಅಲ್ಲಿಂದಲೇ ಕರ್ನಾಟಕಕ್ಕೆ ಪ್ರಯಾಣಿಸಲಿದ್ದಾರೆ ಎಂದು ಈ ಪ್ರಕಟಣೆಯಲ್ಲಿ ಹೇಳಲಾಗಿದೆ. 
ಡಿಸೆಂಬರ್ 23ರಂದು ರಾಷ್ಟ್ರಪತಿ ಮುಖರ್ಜಿ ಅವರು ಬೆಂಗಳೂರಿನಲ್ಲಿ ಬಿಷಪ್‌ ಕಾಟನ್‌ ಬಾಲಕರ ಶಾಲೆಯ 150ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಗಳನ್ನು ಮುಗಿಸಿ ಮುಖರ್ಜಿ ಅವರು ಅದೇ ದಿನ ಮತ್ತೆ ಸಿಕಂದರಾಬಾದ್‌ಗೆ ಮರಳಿ ಪ್ರಯಾಣಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.